ಕಡಬ ಟೈಮ್ (KADABA TIMES): ಅಪ್ರಾಪ್ತೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ರಾಜಕೀಯ ಪಕ್ಷದ ಮುಖಂಡನೊಬ್ಬನ ವಿರುದ್ದ ವಿಟ್ಲ ಠಾಣೆಯಲ್ಲಿ ದಲಿತ ದೌರ್ಜನ್ಯ ಹಾಗೂ ಪೊಕ್ಸೋ ಪ್ರಕರಣ ದಾಖಲಾಗಿದೆ.


ವ್ಯವಸಾಯ ಸೇವಾ ಸಹಕಾರಿ ಸಂಘವೊಂದರಲ್ಲಿ ನಿರ್ದೇಶಕರಾಗಿರುವ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಭಟ್ ಪ್ರಕರಣದ ಆರೋಪಿ ಎಂದು ತಿಳಿದು ಬಂದಿದೆ.




16 ವರ್ಷದ ಬಾಲಕಿ ಸಂತ್ರಸ್ತೆಯಾಗಿದ್ದು, ಈಕೆಯ ಪೋಷಕರು ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಆರೋಪಿಯು ಬಾಲಕಿಯ ಜತೆ ಅನುಚಿತವಾಗಿ ವರ್ತಿಸಿದ್ದಾನೆ ಹಾಗೂ ಕೀಳು ಮಟ್ಟದ ಪದ ಪ್ರಯೋಗ ಮಾಡಿರುವುದಾಗಿ ದೂರಲಾಗಿದೆ.


ಪ್ರಕರಣ ದಾಖಲಾದ ಮಾಹಿತಿ ಹೊರ ಬರುತ್ತಿದ್ದಂತೆ ಕೃತ್ಯ ಎಸಗಿದಾತ ತಲೆಮರೆಸಿಕೊಂಡಿದ್ದಾನೆ. ಕಳೆದೆರಡು ತಿಂಗಳುಗಳಿಂದ ಬಾಲಕಿ ಶಾಲೆಗೆ ಹೋಗಿಲ್ಲ ಎಂದು ಹೇಳಲಾಗುತ್ತಿದೆ. ಈ ಘಟನೆಯ ಬಗ್ಗೆ ಭಾರೀ ಸಂಶಯ ವ್ಯಕ್ತವಾಗಿದ್ದು, ಸೂಕ್ತ ತನಿಖೆಗೆ ಒತ್ತಾಯಗಳು ಹೆಚ್ಚಿದೆ