23.1 C
Kadaba
Wednesday, April 2, 2025

ಹೊಸ ಸುದ್ದಿಗಳು

ಗೂಡ್ಸ್ ವಾಹನದಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ: ಉಪ್ಪಿನಂಗಡಿ ಬಳಿ ಮೂವರ ಬಂಧನ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಪೇಕ್ಷಾರ್ಹ, ಅಥವಾ ತಪ್ಪು ಮಾಹಿತಿಗಳು ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್( KADABA TIMES):  ಗೂಡ್ಸ್ ವಾಹನವೊಂದರಲ್ಲಿ ಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ, ಈ ಸಂಬಂಧ ಹಾಸನ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

kadabatimes.in

ಹಾಸನ ತಾಲೂಕು ಸಾಲಗಾಮೆ ಹೋಬಳಿ ನಿವಾಸಿಗಳಾದ ಪ್ರತಾಪ್ ಎಸ್.ಎಂ.(28ವ.), ಪವನ್ ಸಿ.(24ವ.), ಶ್ರೇಯಸ್ ಹೆಚ್.ವಿ.(24ವ.) ಆರೋಪಿಗಳು.

kadabatimes.in
kadabatimes.in

ಮಾ.25ರಂದು ಸಂಜೆ ಉಪ್ಪಿನಂಗಡಿ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಮನಿಶಾ ಎಂ., ಅವಿನಾಶ್ ಹೆಚ್. ಹಾಗೂ ಸಿಬ್ಬಂದಿಗಳು ಇಲಾಖಾ ವಾಹನದಲ್ಲಿ ರೌಂಡ್ಸ್ ಕರ್ತವ್ಯ ನಿರ್ವಹಿಸಿದ ಬಳಿಕ 34ನೇ ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ತಪಾಸಣೆ ಮಾಡುತ್ತಿದ್ದಾಗ ನೆಲ್ಯಾಡಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಹೋಗುತ್ತಿದ್ದ  ಗೂಡ್ಸ್ ವಾಹನ ವನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ಸದ್ರಿ ವಾಹನದಲ್ಲಿ ಎರಡು ಎಮ್ಮೆ ಹಾಗೂ ಒಂದು ಹಸುವನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ.

kadabatimes.in

ಈ ಹಿನ್ನೆಲೆಯಲ್ಲಿ ಪೊಲೀಸರು ವಾಹನದಲ್ಲಿ ಮೂವರು ಆರೋಪಿಗಳನ್ನು, ಮೂರು ಜಾನುವಾರು ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ.  ವಶಪಡಿಸಿಕೊಂಡ ಜಾನುವಾರುಗಳ ಮೌಲ್ಯ ಒಟ್ಟು 42 ಸಾವಿರ ರೂ.,ಹಾಗೂ ವಾಹನದ ಮೌಲ್ಯ 1.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.