32.3 C
Kadaba
Saturday, April 19, 2025

ಹೊಸ ಸುದ್ದಿಗಳು

ನೆಲ್ಯಾಡಿ ಪೇಟೆಯಲ್ಲಿ ಅವಾಂತರವನ್ನೇ ಸೃಷ್ಟಿಸಿದ ಮಳೆ

ಕಡಬ ಟೈಮ್ಸ್ ವೆಬ್ ತಾಣದಲ್ಲಿ ಸುದ್ದಿಗಳನ್ನು ಪರಿಶೀಲಿಸಿಯೇ ಪ್ರಕಟಿಸಲಾಗುತ್ತಿದೆ. ಒಂದು ವೇಳೆ ಆಕ್ಷೇಪಾರ್ಹ, ಅಥವಾ ತಪ್ಪು ಮಾಹಿತಿಗಳು  ಕಂಡು ಬಂದಲ್ಲಿ ಇಲ್ಲವೇ ಸಲಹೆಗಳಿದ್ದರೆ  ಸಂಪಾದಕರ ದೂರವಾಣಿ ಸಂಖ್ಯೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.

Must read

Kadabatimes
Kadabatimeshttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಡಿಜಿಟಲ್ ಮಾಧ್ಯಮವಾಗಿದೆ.ರಾಜಕೀಯ ಹಸ್ತಕ್ಷೇಪ ಇಲ್ಲದ, ಬಂಡವಾಳ ಶಾಹಿಗಳ ನಿಯಂತ್ರಣದಲ್ಲಿರದ ಸ್ಥಳೀಯ ಆನ್ಲೈನ್ ಮಾಧ್ಯಮ ಇದಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳನ್ನು ಹೆಚ್ಚು ಪ್ರಕಟಿಸುತ್ತಿದೆ. ಸ್ಥಳೀಯ ತಾಲೂಕು, ಜಿಲ್ಲೆ, ರಾಜ್ಯ, ರಾಷ್ಟ್ರದ ಪ್ರಮುಖ ವಿಚಾರಗಳನ್ನು ಪ್ರಕಟಿಸುತ್ತದೆ. ನಿಮ್ಮೂರಿನ ಸುದ್ದಿಗಳು, ಜಾಹೀರಾತು ಅಥವಾ ಸಲಹೆಗಳಿದ್ದರೆ 93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು

ಕಡಬ ಟೈಮ್ಸ್ (KADABA TIMES) ನೆಲ್ಯಾಡಿ: ಎ.9 ರಂದು ಸಂಜೆ ಸುರಿದ ಭಾರೀ ಮಳೆ ನೆಲ್ಯಾಡಿ ಪೇಟೆಯಲ್ಲಿ ಅವಾಂತರವನ್ನೇ ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನೆಲ್ಯಾಡಿ ಪೇಟೆಯಲ್ಲಿ ಅಪೂರ್ಣ ಹಂತದಲ್ಲಿದ್ದು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆ ನೀರು ಪ್ರವಾಹದಂತೆ ರಸ್ತೆಯಲ್ಲೇ ಹರಿದು ತಗ್ಗುಪ್ರದೇಶಗಳಿಗೆ ನುಗ್ಗಿದೆ.

kadabatimes.in

ನೆಲ್ಯಾಡಿ ಭಾಗದಲ್ಲಿ ಸಂಜೆ 4 ಗಂಟೆಯಿಂದ 6 ಗಂಟೆ ತನಕ ಸುಮಾರು 2 ತಾಸು ಭಾರೀ ಮಳೆಯಾಗಿದ್ದು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೇ ಮಳೆ ನೀರು ಪ್ರವಾಹದಂತೆ ಪೇಟೆಯಲ್ಲಿನ ಸರ್ವೀಸ್ ರಸ್ತೆಯಲ್ಲೇ ಹರಿದು ಹೋಗಿದೆ. ಸರ್ವೀಸ್ ರಸ್ತೆಯಲ್ಲಿ 1 ಅಡಿಗೂ ಹೆಚ್ಚು ನೀರು ನಿಂತಿತ್ತು. ಅಂಡರ್‌ಪಾಸ್‌ನಲ್ಲೂ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು, ಪಾದಚಾರಿಗಳು ಪರದಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

kadabatimes.in
kadabatimes.in

ನೆಲ್ಯಾಡಿ ಪೇಟೆಯಲ್ಲಿನ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಅರ್ಧದಲ್ಲೇ ನಿಂತಿದ್ದು ಮೇಲ್ಸೇತುವೆಯಿಂದ ಧಾರಕಾರ ಮಳೆ ನೀರು ಸರ್ವೀಸ್ ರಸ್ತೆಗೆ ಹರಿದು ಬಂದಿದೆ. ಎರಡೂ ಬದಿಯ ಸರ್ವೀಸ್ ರಸ್ತೆಯ ಪಕ್ಕದಲ್ಲೇ ಚರಂಡಿ ವ್ಯವಸ್ಥೆ ಮಾಡಲಾಗಿದ್ದರೂ ಸರ್ವೀಸ್ ರಸ್ತೆಗಿಂತ ಕಾಂಕ್ರಿಟ್ ಚರಂಡಿ ಎತ್ತರವಾಗಿರುವುದರಿಂದ ನೀರು ಹರಿದು ಹೋಗುತ್ತಿಲ್ಲ. ಇದರಿಂದಾಗಿ ಸರ್ವೀಸ್ ರಸ್ತೆಯಲ್ಲೇ ಸುಮಾರು 1 ಅಡಿಗೂ ಹೆಚ್ಚು ನೀರು ನಿಂತಿತ್ತು. ಕೆಲವೊಂದು ತಗ್ಗು ಪ್ರದೇಶಗಳಲ್ಲಿ ನೀರು ಹರಿದ ಪರಿಣಾಮ ತಗ್ಗುಪ್ರದೇಶದಲ್ಲಿನ ಅಂಗಡಿಗಳಿಗೂ ನೀರು ನುಗ್ಗಿದೆ.

kadabatimes.in

ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಗುತ್ತಿಗೆದಾರರು ತಕ್ಷಣ ಸ್ಪಂದಿಸಿ ಮಳೆಗಾಲದಲ್ಲಿ ಸಂಭವಿಸಬಹುದಾದ ಅಪಾಯಗಳನ್ನು ತಪ್ಪಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ನೆಲ್ಯಾಡಿಯ ವರ್ತಕರು, ಸಾರ್ವಜನಿಕರು ಒತ್ತಾಯಿಸಿದ್ದಾರೆ.

ನಿಮ್ಮೂರಿನ ಸುದ್ದಿಗಳು, ಜಾಹೀರಾತುಗಳಿಗಾಗಿ  93804 74819 ಸಂಖ್ಯೆಯನ್ನು ಸಂಪರ್ಕಿಸಬಹುದು.ಇಲ್ಲವೇ kadabatimes@gmail.com ಗೆ ಇಮೇಲ್ ಕಳುಹಿಸಬಹುದು. ನಮ್ಮನ್ನು  Facebook ಅಥವಾ Youtube ನಲ್ಲಿ ಹಿಂಬಾಲಿಸಿ.