ಕಡಬ ಟೈಮ್ಸ್ (KADABA TIMES):ರೈಲ್ವೇ ಹಳಿ ಮೀಟರ್‌ಗೇಜ್ ಆಗಿದ್ದ ಅವಧಿಯಲ್ಲಿ ಸಂಚರಿಸುತ್ತಿದ್ದ ಈ ಮಂಗಳೂರು- ಸುಬ್ರಹ್ಮಣ್ಯ ನಡುವಿನ ಪ್ರಯಾಣಿಕ ರೈಲು, ಹಳಿ ಬ್ರಾಡ್‌ಗೇಜ್ ಆಗಿ ಪರಿರ್ವತನೆಯ ವೇಳೆಗೆ 1995ರಲ್ಲಿ ಸ್ಥಗಿತಗೊಳಿಸಲಾಗಿತ್ತು.


ಬಳಿಕ ಮಂಗಳೂರು ಸೆಂಟ್ರಲ್‌ನಿಂದ ಕಬಕ ಪುತ್ತೂರು ವರೆಗೆ ಸಂಚರಿಸುತ್ತಿರುವ ರೈಲನ್ನು ಹಿಂದಿನಂತೆ ಸುಬ್ರಹ್ಮಣ್ಯಕ್ಕೆ ವಿಸ್ತರಿಸಬೇಕೆಂದು ರೈಲ್ವೇ ಹೋರಾಟಗಾರರು ಹಲವು ಮನವಿ, ಒತ್ತಾಯ ವ್ಯಕ್ತವಾಗಿದ್ದವು. ಸೋಮಣ್ಣರವರು ರೈಲ್ವೇ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳೂರಿನಲ್ಲಿ ನಡೆದ ಪ್ರಥಮ ಉನ್ನತ ಮಟ್ಟದ ರೈಲ್ವೇ ಅಧಿಕಾರಿಗಳ ಸಭೆಯಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯಿಸಿದ್ದರು.


ಇಂದು ಮತ್ತೆ ರೈಲು ಪುನರಾರಂಭಕ್ಕೆ ಹಸಿರು ನಿಶಾನೆ ನೀಡುವ ಸಂದರ್ಭ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಅಪಾರ ಸಂಖ್ಯೆಯ ರೈಲು ಪ್ರಯಾಣಿಕರ ಜತೆ, ರೈಲು ಹೋರಾಟಗಾರರು ಸಾಕ್ಷಿಯಾಗಿ ಸಂತಸ ವ್ಯಕ್ತಪಡಿಸಿದರು. ಕಡಬ ತಾಲೂಕಿನ ನೆಟ್ಟಣದಲ್ಲಿರುವ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಚಂಡೆ ವಾದ್ಯಗಳ ಘೋಷ, ಹೂವಿನ ಹಾರಗಳು ಮತ್ತು ನೂರಾರು ಜನರ ಉಪಸ್ಥಿತಿಯಲ್ಲಿ ಶೇಷ ರೈಲಿಗೆ ಭವ್ಯ ಸ್ವಾಗತ ಕೋರಿದರು .


ರಾತ್ರಿ 8.12ರ ಸುಮಾರಿಗೆ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ವಿಶೇಷ ರೈಲು ತಲುಪಿತು. ದ.ಕ ಲೋಕಸಭಾ ಕ್ಷೇತ್ರದ ಸಂಸದ ಬೃಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮೂರುಳ್ಯ, ರಾಜಕೀಯ ಪ್ರಮುಖರು, ಹೋರಾಟಗಾರರು ,ಸ್ಥ ರೈಲ್ವೇ ಬಳಕೆದಾರರ ವೇದಿಕೆಯ ಅಧ್ಯಕ್ಷ ಪ್ರಸಾದ್ ಕೆ.ಜಿ ನೆಟ್ಟಣ, ಎ ಬ್ಯಾಂಕ್ ಅಧ್ಯಕ್ಷ ಒಡಿಯಪ್ಪ ಸಿ., ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮಧುಸೂದನ್, ಕಿಶೋರ್ ಶಿರಾಡಿ ಮತ್ತಿತರರು ಭಾಗವಹಿಸಿದ್ದರು. ಕಡಬ ಪೊಲೀಸ್ ಠಾಣಾ ಎಸ್. ಐ ಅಭಿನಂದನ್ ನೇತೃತ್ವದ ಪೊಲೀಸರು, ರೈಲ್ವೆ ಸಿಬ್ಬಂದಿ ಶಿಸ್ತುಬದ್ಧ ಭದ್ರತೆ ಹಾಗೂ ವ್ಯವಸ್ಥೆಯ ನಿರ್ವಹಣೆಯಲ್ಲಿ ತೊಡಗಿದ್ದರು.
ಈ ನೂತನ ರೈಲು ಸೇವೆಯಿಂದ ಸುಬ್ರಹ್ಮಣ್ಯ, ಸುಳ್ಯ ,ಪಂಜ ,, ಕಡಬ ಭಾಗದ ನಿವಾಸಿಗಳಿಗೆ ಮಂಗಳೂರಿಗೆ ನೇರ ಸಂಪರ್ಕ ಸಿಗಲಿದ್ದು, ದೈನಂದಿನ ಸಂಚಾರದಿಂದ ವಿದ್ಯಾರ್ಥಿಗಳು, ಉದ್ಯೋಗಸ್ಥರಿಗೆ ಅನುಕೂಲವಾಗಲಿದೆ.


ಸಚಿವ ಸೋಮಣ್ಣ ಪ್ರಶಂಸೆ: ದ.ಕ. ಜಿಲ್ಲೆಯ ಲೋಕಸಭಾ ಸದಸ್ಯ, ಯುವ ಸಂಸದ ಬ್ರಿಜೇಶ್ ಚೌಟ ತಮ್ಮ ಜಿಲ್ಲೆಗೆ ಅಗತ್ಯವಾದ ಯಾವುದೇ ಕೆಲಸ ಕಾರ್ಯಗಳನ್ನು ಸಚಿವರ ಬೆನ್ನು ಹತ್ತಿ ಹಠ ಹಿಡಿದು ಮಾಡಿಸುತ್ತಾರೆ. ಇದು ಒಬ್ಬ ಲೋಕಸಭಾ ಸದಸ್ಯನಿಗೆ ಇರಬೇಕಾದ ಒಳ್ಳೆಯ ಲಕ್ಷಣ. ಅಂತಹ ಸಂಸದರನ್ನು ಜಿಲ್ಲೆಯ ಜನತೆ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಸೋಮಣ್ಣರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.