
ಕಡಬ:ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕರೊಬ್ಬರು ಕುಸಿದು ಬಿದ್ದು ಮೃತ ಪಟ್ಟ ಘಟನೆ ಮರ್ದಾಳ ಸಮೀಪದ ಐತ್ತೂರು ಗ್ರಾಮದಿಂದ ವರದಿಯಾಗಿದೆ.


ಸುಬ್ರಹ್ಮಣ್ಯ ರಬ್ಬರ್ ವಿಭಾಗದ RRK 2014 ನೇ ರಬ್ಬರ್ ತೋಟ ಮರ್ಧಾಳ ಬ್ರಾಂತಿಕಟ್ಟೆ ಎಂಬಲ್ಲಿ ಖಾಯಂ ರಬ್ಬರ್ ಟ್ಯಾಪರ್ ಆಗಿ ಕೆಲಸ ಮಾಡುತ್ತಿದ್ದ ಸುರೇಶ ಎಂಬವರು ಮೃತಪಟ್ಟವರು.
ಅ.25 ರಂದು ಮದ್ಯಾಹ್ನದ ವೇಳೆ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವ ಸಮಯ ಕುಸಿದು ಬಿದ್ದಿದ್ದು ಚಿಕಿತ್ಸೆಗಾಗಿ ಕಡಬ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದು ವೈದ್ಯಾಧಿಕಾರಿಯವರು ಪರಿಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿರುವುದಾಗಿ ತಿಳಿದು ಬಂದಿದೆ.


ಪತ್ನಿ ದಿವ್ಯ ಅವರು ಒಂದು ವಾರದ ಹಿಂದೆ ದೀಪಾವಳಿ ಹಬ್ಬದ ಪ್ರಯುಕ್ತ ಅವರ ಮಕ್ಕಳನ್ನು ಕರೆದುಕೊಂಡು ಸುಳ್ಯ ತಾಲೂಕಿನ ಕೂಟೇಲು ಎಂಬಲ್ಲಿಗೆ ಹೋಗಿದ್ದರು. ಪತಿಯ ಅಣ್ಣನ ಮಗ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದು ಸುಳ್ಯದಿಂದ ಹೊರಟು ಕಡಬ ಸರಕಾರಿ ಆಸ್ಪತ್ರೆಗೆ ಬಂದಾಗ ವೈದ್ಯಾಧಿಕಾರಿಯವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ರಬ್ಬರ್ ಟ್ಯಾಪಿಂಗ್ ಕೆಲಸಮಾಡುತ್ತಿರುವಾಗ ಹೃದಯಾಘಾತ ಅಥವಾ ಇನ್ನಾವುದೋ ಖಾಯಿಲೆಯಿಂದ ಮೃತಪಟ್ಟಿರುವುದಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣಾ ಯು ಡಿ ಆರ್ ನಂಬ್ರ 31/2025 ಕಲಂ:194 BNSS-2023.ಯಂತೆ ಪ್ರಕರಣ ದಾಖಲಾಗಿದೆ.
