ನಮ್ಮ ಕಡಬಕ್ಕೆ ಹೆಮ್ಮೆ:ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ಕಡಬದ ಕ್ರೀಡಾಪಟು

kadaba times

ಕಡಬ:  22 ನೇ ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ ಕ್ರೀಡಾಕೂಟದಲ್ಲಿ ಕಡಬದ  ರೆಂಜಿಲಾಡಿ ಗ್ರಾಮದ ಬಾಲಕೃಷ್ಣ ಗೌಡ  ಅವರು ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾರೆ.

kadaba times
uniq

ಮಂಗಳೂರು ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಅಕ್ಟೊಬರ್ 19 ರಂದು ಆಯೋಜಿಸಲಾಗಿತ್ತು.

5 ಕಿಲೋಮೀಟರ್ ವೇಗದ ನಡಿಗೆಯಲ್ಲಿ ಪ್ರಥಮ,  1500 ಮೀ ಓಟದಲ್ಲಿ ಪ್ರಥಮ ಮತ್ತು 800.ಮೀ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿದ್ದಾರೆ.  ಡಿಸೆಂಬರ್ 20 ಮತ್ತು 21ರಂದು ಕೋಲಾರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಾಸ್ಟರ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ.

kadaba times
kadaba times

ಇವರು ಅಥ್ಲೆಟಿಕ್ಸ್ ನಲ್ಲಿ ಮಾತ್ರವಲ್ಲದೆ ಈಗಾಗಲೇ ಹಲವು ಕಡೆಗಳಲ್ಲಿ ಮ್ಯಾರಥಾನ್ ಸ್ಪರ್ಧೆಯಲ್ಲಿಯೂ ಭಾಗವಹಿಸಿರುತ್ತಾರೆ.

Related Articles

Latest Articles