
ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳ ವಿರುದ್ಧ ಬೆಂಗಳೂರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು, ಸಮಾಜದಲ್ಲಿ ಭಯ ಉಂಟು ಮಾಡುವುದು, ಹಳೇ ದ್ವೇಷದಿಂದಲೇ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ..


ಮಂಗಳೂರು ಮೂಲದ ಸಫ್ವಾನ್ ಅಲಿಯಾಸ್ ಕವಲೂರು ಸಫ್ವಾನ್, ನಿಯಾಜ್ ಅಲಿಯಾಸ್ ನಿಯಾ, ಮೊಹಮ್ಮದ್ ಮುಸಾಮೀರ್, ನೌಷಾದ್, ಆದಿಲ್ ಮಹರೂಫ್, ಅಜರುದ್ದೀನ್, ಅಬ್ದುಲ್ ಖಾದರ್, ಕಲಂದರ್ ಶಫಿ, ಎಂ.ನಾಗರಾಜ್, ರಂಜಿತ್, ಮೊಹಮ್ಮದ್ ರಿಜ್ವಾನ್ ಎಂಬುವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.
ಈ ಪೈಕಿ ಆದಿಲ್ ಮಹರೂಫ್, ಸುಹಾಸ್ ಶೆಟ್ಟಿ ಹಂತಕರಿಗೆ ಹಣ ಪೂರೈಕೆ ಮಾಡಿದ್ದಾನೆ. ಭಯೋತ್ಪಾದನೆ ಹರಡುವುದು, ಭಯ ಉಂಟು ಮಾಡುವುದರ ಜತೆಗೆ ಹಳೇ ದ್ವೇಷದಿಂದಲೂ ಹತ್ಯೆಗೈಯಲಾಗಿದೆ ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಧಿತರ ಪೈಕಿ ಬಹುತೇಕ ಮಂದಿ ನಿಷೇಧಿತ ಪಿಎಫ್ಐ ಹಾಗೂ ಕೆಎಫ್ಡಿ ಮಾಜಿ ಸದಸ್ಯರು ಎಂದು ಹೇಳಲಾಗಿದೆ.


ಮಂಗಳೂರಿನ ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ 2025ರ ಮೇ 1ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹ*ತ್ಯೆ ಮಾಡಲಾಗಿತ್ತು. ಈ ಸಂಬಂಧ ಮಂಗಳೂರು ಪೊಲೀಸರು 12 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ವರ್ಗಾವಣೆ ಮಾಡಿತ್ತು. ಇದೀಗ ತನಿಖೆ ಪೂರ್ಣಗೊಳಿಸಿರುವ ಎನ್ಐಎ 11 ಮಂದಿ ಆರೋಪಿಗಳ ವಿರುದ್ಧ ಬೆಂಗಳೂರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.
ಮಂಗಳೂರಿನ ಬಜ್ಪೆ ಠಾಣೆ ವ್ಯಾಪ್ತಿಯಲ್ಲಿ 2025ರ ಮೇ 1ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಮಂಗಳೂರು ಪೊಲೀಸರು 12 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)ಗೆ ವರ್ಗಾವಣೆ ಮಾಡಿತ್ತು. ಇದೀಗ ತನಿಖೆ ಪೂರ್ಣಗೊಳಿಸಿರುವ ಎನ್ಐಎ 11 ಮಂದಿ ಆರೋಪಿಗಳ ವಿರುದ್ಧ ಬೆಂಗಳೂರು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ.
