
ಕಡಬ ಟೈಮ್ಸ್, ಪ್ರಮುಖ ಸುದ್ದಿ: ನೆಲ್ಯಾಡಿಯ ಬಾರೊಂದರ ಮಾಲಕನ ಶವ ನದಿ ಕಿನಾರೆಯಲ್ಲಿ ಪತ್ತೆಯಾದ ಬಗ್ಗೆ ವರದಿಯಾಗಿದೆ.


ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (30ವ) ಮೃತಪಟ್ಟವರು.
ಅಭಿಷೇಕ್ ಆಳ್ವ ಅವರ ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ (ನ.07) ಮುಂಜಾನೆ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.


ಕಂಬಳ ಪ್ರೇಮಿಯಾಗಿದ್ದ ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಪ್ರಸ್ತುತ ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಅನ್ನು ಲೀಜ್ ಗೆ ಪಡೆದು ಉದ್ಯಮ ನಡೆಸುತ್ತಿದ್ದರು. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
