
ಕಡಬ: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಪೋಸ್ಟ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಓರ್ವನನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ.


ಸಾಮಾಜಿಕ ಜಾಲತಾಣವಾದ Instagram ನ target_boy900 ಎಂಬ Instagram ಖಾತೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷದ ಹಿನ್ನೆಲೆಯಲ್ಲಿ ನಡೆದ ಕೊಲೆಗೆ ಸಂಬಂಧಿಸಿದಂತೆ, ಪ್ರತೀಕಾರಕ್ಕೆ ಪ್ರಚೋದಿಸುವಂತಹ ಸಂದೇಶವನ್ನು ಪ್ರಸಾರ ಮಾಡಲಾಗಿತ್ತು.
ಈ ಬಗ್ಗೆ ದಿನಾಂಕ: 02.06.2025 ರಂದು ಕಡಬ ಪೊಲೀಸ್ ಠಾಣಾ ಅಕ್ರ: 40/2025 ಕಲಂ: 55,353(2) r/w 103 BNS-2023 ರಂತೆ ಪ್ರಕರಣ ದಾಖಲಾಗಿತ್ತು.


ಈ ಪ್ರಕರಣದ ತನಿಖೆ ನಡೆಸಲಾಗಿದ್ದು ನ.8 ರಂದು ರಂದು ಮಂಗಳೂರಿನ ಕಸಬಾ ಬೆಂಗ್ರೆಯ ಮಹಮ್ಮದ್ ಮುನಾವರ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ.
