
ಕಡಬ: ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ನ.11 ರಂದು ತಿಳಿದು ಬಂದಿದೆ.


ಕಲ್ಲುಗುಡ್ಡೆ ನಿವಾಸಿ ,ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ ( ಅಂದಾಜು 25 ವ) ಎಂದು ಗುರುತಿಸಲಾಗಿದೆ.


ಸದ್ಯ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದು ವಿದೇಶಕ್ಕೆ ಹೋಗುವ ಸಿದ್ದತೆ ಮಾಡುತ್ತಿದ್ದ ಎಂಬ ಮಾಹಿತಿ ಲಭಿಸಿದೆ. ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದು ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
