ಬಿ.ಸಿ.ರೋಡ್ ಬಳಿ ಸರ್ಕಲ್ ಗೆ ಢಿಕ್ಕಿ ಹೊಡೆದ ಕಾರು:ಇಬ್ಬರು ಸ್ಥಳದಲ್ಲೇ ಮೃತ್ಯು

kadaba times

ಕಡಬ ಟೈಮ್ಸ್, ಪ್ರಮುಖ ಸುದ್ದಿ: ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

kadaba times
uniq

ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

kadaba times
kadaba times

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.

Related Articles

Latest Articles