ಮಹಿಷಾಸುರನ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಪ್ರತಿಭಾನ್ವಿತ ಯಕ್ಷಗಾನ ಕಲಾವಿದ ಮೃತ್ಯು

kadaba times

ಮಹಿಷಾಸುರನ  ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಯಕ್ಷಗಾನ ಕಲಾವಿದ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಉಡುಪಿ ಜಿಲ್ಲೆಯ  ಕುಂದಾಪುರದ ಸೌಡ ಸಮೀಪ ನಡೆದಿದೆ.

kadaba times
uniq

ಮಂದಾರ್ತಿ 2ನೇ ಮೇಳದ ಪ್ರತಿಭಾನ್ವಿತ ಕಲಾವಿದರಾಗಿದ್ದ ಈಶ್ವರ ಗೌಡ ಮೃತ ದುರ್ದೈವಿ.

ಬುಧವಾರ( ನ19) ಮಧ್ಯ ರಾತ್ರಿ ಕುಂದಾಪುರದ ಸೌಡ ಸಮೀಪ ದೇವಿ ಮಾಹಾತ್ಮೆ ಪ್ರಸಂಗದಲ್ಲಿ ಮಹಿಷಾಸುರ ಪಾತ್ರ ನಿರ್ವಹಿಸಿದ್ದರು.  ಪಾತ್ರ ಕೊನೆಯಾಗಿ ಸಂಪೂರ್ಣ ವೇಷ ಕಳಚುವ ಮುನ್ನವೇ ಹೃದಯಾಘಾತದಿಂದ ಕುಸಿದಿದ್ದಾರೆ.

kadaba times
kadaba times

ಸಹಕಲಾವಿದರು ಆಸ್ಪತ್ರೆಗೆ ಸಾಗಿಸುವ ಮುನ್ನವೇ ಇಹಲೋಕ ತ್ಯಜಿಸಿದ್ದರು. ಇವರು ಶೃಂಗೇರಿ ಸಮೀಪದ ನೆಮ್ಮಾರ್ ನಿವಾಸಿಯಾಗಿದ್ದರು. ಈಶ್ವರ ಗೌಡ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.ಅದೇ ಮೇಳದಲ್ಲಿ ತಂದೆ ಕೂಡ ವೇಷದಾರಿಯಾಗಿದ್ದರು.

ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು  ಈಶ್ವರಗೌಡ ಪಾತ್ರ ನಿರ್ವಹಿಸಿದ್ದರು. ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.

Related Articles

Latest Articles