ಕಡಬ ಟೈಮ್ಸ್, ನೆಲ್ಯಾಡಿ: ಮಂಗಳೂರು- ಬೆಂಗಳೂರು ರಸ್ತೆ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ಸ್ಕೂಟಿ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಸ್ಕೂಟ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.




ಶಿರಾಡಿ ಗ್ರಾಮದ ಕೋಟಾಯಿಲ್ ನಿವಾಸಿ ಜೋನ್ (56) ಮೃತರು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ಹಾಗೂ ಶಿರಾಡಿಯಿಂದ ಕೋಟಾಯಿಲ್‌ನ ಮನೆ ತೆರಳುತ್ತಿದ್ದಸ್ಕೂಟಿಯ ನಡುವೆ ಅಪಘಾತ ಸಂಭವಿಸಿದೆ.


ಘಟನೆ ನಡೆದ ಸಂದರ್ಭ ಅದೇ ಮಾರ್ಗವಾಗಿ ಬರುತ್ತಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ಕಳಿಸಿಕೊಟ್ಟು ಮಾನವೀಯತೆ ಮೆರೆದಿದ್ದರು.


ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ಪರಿಶೀಲಿಸಿದ್ದಾರೆ. ಅವರಿಗೆ ತಂದೆ, ಪತ್ನಿ, ಮೂವರು ಪುತ್ರಿಯರು ಹಾಗೂ ಪುತ್ರರಿದ್ದಾರೆ.