
ಕಡಬ: ತಡ ರಾತ್ರಿ ಮನೆಗೆ ಅಕ್ರಮ ಪ್ರವೇಶ ಮಾಡಿ ಮನೆ ಸದಸ್ಯರಿಗೆ ಹಲ್ಲೆ ಮಾಡಿದ ಆರೋಪದ ಮೇರೆಗೆ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿಯೋರ್ವನನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಮಾನ್ಯ ನ್ಯಾಯಾಲಕ್ಕೆ ಹಾಜರು ಪಡಿಸಿದ ಘಟನೆ ಡಿ.4 ರಂದು ವರದಿಯಾಗಿದೆ.


ಕಡಬ ಠಾಣೆಯ ಹೆಚ್. ಸಿ ರಾಜು ನಾಯ್ಕ್ ಎಂಬವರ ವಿರುದ್ದ ಪ್ರಕರಣ ದಾಖಲಾಗಿದ್ದು ಕರ್ತವ್ಯದಿಂದ ಅಮಾನತುಗೊಂಡ ಪೊಲೀಸ್ ಸಿಬ್ಬಂದಿಯಾಗಿದ್ದಾರೆ.
ಕೊಯಿಲ ಗ್ರಾಮದ ನಿವಾಸಿ ಬಾಬು ಗೌಡ ಡಿ.3 ರಂದು ಎಂಬವರ ದೂರಿನಂತೆ ತಡರಾತ್ರಿ ವೇಳೆ ಮನೆಯ ಸಮೀಪದ ಸಹೋದರನ ಮನೆಯಲ್ಲಿ ಜೋರಾಗಿ ಶಬ್ದ ಕೇಳಿದೆ. ನೋಡಿದಾಗ ಅಕ್ರಮವಾಗಿ ಪ್ರವೇಶಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬನನ್ನು ಮನೆಯ ಸದಸ್ಯರುಗಳು ಹಿಡಿದುಕೊಂಡಿದ್ದು, ಅಪರಿಚಿತನು ತಪ್ಪಿಸಿಕೊಳ್ಳುವ ಉದ್ದೇಶದಿಂದ, ಮನೆಯ ಸದಸ್ಯರ ಪೈಕಿ ಚೇತನ್ ಎಂಬಾತನಿಗೆ ಮೇಲೆ ಕೈಯಿಂದ ಹಲ್ಲೆ ಮಾಡಿರುತ್ತಾನೆ ಎಂದು ಆರೋಪಿಸಲಾಗಿದೆ.


ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿಯು ಕಡಬ ಪೊಲೀಸ್ ಠಾಣೆಯ ಹೆಚ್.ಸಿ ರಾಜು ನಾಯ್ಕ ಎಂಬುದಾಗಿ ತಿಳಿದು ಬಂದಿರುತ್ತದೆ. ತಡರಾತ್ರಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 86/2025. ಕಲಂ: ಕಲಂ-329(3), 115(2), 331(6) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಸದ್ರಿ ಹೆಚ್.ಸಿ ರಾಜು ನಾಯ್ಕ ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ತಕ್ಷಣ ಕರ್ತವ್ಯದಿಂದ ಅಮಾನತ್ತುಗೊಳಿಸಲಾಗಿರುತ್ತದೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
