
ಕುಕ್ಕೆ ಸುಬ್ರಹ್ಮಣ್ಯ: ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆ ದಾಖಲಾದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ.


ಸುಳ್ಯ ತಾಲೂಕು ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ .
ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡ ಹಿನ್ನೆಲೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು .


ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ತಂದೆ, ತಾಯಿ, ಸಹೋದರ, ಸಹೋದರಿ ಇದ್ದಾರೆ.
