
ಕಡಬ: ಗೋಹತ್ಯಾ ನಿಷೇಧ ಕಾನೂನು ತಿದ್ದುಪಡಿ ಮಾಡಲು ಹೊರಟಿರುವ ರಾಜ್ಯ ಸರಕಾರದ ಧೋರಣೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್ ನೇತೃತ್ವದಲ್ಲಿ ಡಿ.9 ರಂದು ಕಡಬದಲ್ಲಿ ಪ್ರತಿಭಟನೆ ನಡೆಯಿತು.


ಗೋಹತ್ಯಾ ನಿಷೇಧ ಕಾನೂನನ್ನು ಅಲ್ಪ ಸಂಖ್ಯಾಕರ ಓಲೈಕೆಗಾಗಿ ರಾಜ್ಯ ಸರಕಾರ ತಿದ್ದುಪಡಿ ಮಾಡಿ ಗೋಹಂತಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಿದೆ. ಕಟುಕರಿಗೆ ನೆರವಾಗುವ ಸರಕಾರದ ಕ್ರಮ ಖಂಡನೀಯ ಎಂದು ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ಕಡಬ ಆಕ್ರೋಶ ವ್ಯಕ್ತಪಡಿಸಿದರು.


ನಿವೃತ್ತ ಅರಣ್ಯಾಧಿಕಾರಿ ಸದಾಶಿವ ಭಟ್, ತಾ.ಪಂ. ಮಾಜಿ ಅಧ್ಯಕ್ಷೆ ಪುಲಸ್ತಾತ್ಯ ರೈ ವಿಹಿಂಪ ಕಡಬ ಪ್ರಖಂಡದ ಗೌರವಾಧ್ಯಕ್ಷ ಬಾಲಕೃಷ್ಣ ಮಣಿಮುಂಡ, ರಾಧಾಕೃಷ್ಣ , ಕಡ್ಯ ವಾಸುದೇವ ಭಟ್, ಅಧ್ಯಕ್ಷ ಶಿವರಾಮ ಶೆಟ್ಟಿ ಕೇಪು, ವಿಹಿಂಪ ಪುತ್ತೂರು ಜಿಲ್ಲಾ ಸಹಕಾರ್ಯದರ್ಶಿ ಪ್ರಮೋದ್ ರೈ ನಂದುಗುರಿ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.
