Accident-ರಸ್ತೆ ದಾಟುತ್ತಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ಸ್ಥಳದಲ್ಲೇ ಮೃತ್ಯು

kadaba times

KARNATAKA:  ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಕೆಎಸ್ಸಾರ್ಟಿಸಿ ಟಿಕೆಟ್ ತಪಾಸಣೆ ಇನ್ ಸ್ಪೆಕ್ಟರ್ ರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಪಾಳ್ಯ ಸಮೀಪ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಇಂದು ಬೆಳಗ್ಗೆ ನಡೆದಿದೆ.

kadaba times
uniq

ಕೆಎಸ್ಸಾರ್ಟಿಸಿ ಹಾಸನ ವಿಭಾಗೀಯ ತನಿಖಾ ಸಂಚಾರ ನಿಯಂತ್ರಕ ದಳದ ತಪಾಸಣೆ ಇನ್ ಸ್ಪೆಕ್ಟರ್ ಶಕುನಿ ಗೌಡ (57) ಮೃತಪಟ್ಟವರು.

ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಬಸ್ ಅನ್ನು ತಡೆದು, ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸುವ ಉದ್ದೇಶದಿಂದ ಶಕುನಿ ಗೌಡ ರಸ್ತೆ ದಾಟುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಏಕಾಏಕಿ ವೇಗವಾಗಿ ಬಂದ ಕ್ಯಾಂಟ‌ರ್ ವಾಹನ ಅವರಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ.

kadaba times
kadaba times

ಢಿಕ್ಕಿ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಶಕುನಿಗೌಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಚಾಲಕನ ಪತ್ತೆಗೆ ತನಿಖೆ ಮುಂದುವರಿದಿದೆ.

Related Articles

Latest Articles