ಕಡಬ ಟೈಮ್, ವಿಟ್ಲ : ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು ನಗದು ವಶಪಡಿಸಿಕೊಂಡಿದ್ದಾರೆ.




ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ (49 ವ) ಬಂಧಿತ. ಜ.3 ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಆರು ಜನ ಅಪರಿಚಿತರು ಇಡಿ
ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧನೆ ನಡೆಸಿ, ಸುಮಾರು 30 ಲಕ್ಷ ನಗದನ್ನು ದರೋಡೆ ಮಾಡಿ ಪರಾರಿಯಾಗಿದ್ದರು.


ಪೊಲೀಸ್ ಅಧೀಕ್ಷಕರಾದ ಯತೀಶ್ ಎನ್, ಐ.ಪಿ.ಎಸ್
ರವರ ಅದೇಶದ ಮೇರೆಗೆ, ಆರೋಪಿಗಳ ಪತ್ತೆಗಾಗಿ ನಾಲ್ಕು ವಿಶೇಷ ತನಿಖಾ ತಂಡ ರಚಿಸಿ, ಅಪರಾಧಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ ಎಂಬಾತನನ್ನು ಪೊಲೀಸರು ಬಂಧಿಸಿ ಆತನಿಂದ ದರೋಡೆಗೆ ಬಳಸಿದ ಎರ್ಟಿಗಾ ಕಾರು, 5,00,000/-ರೂ ನಗದು ಹಾಗೂ
ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ ಪ್ಲೇಟ್ನ್ನು ವಶಪಡಿಸಿಕೊಂಡಿದ್ದಾರೆ. ಸ್ವಾಧೀನಪಡಿಸಿಕೊಂಡ ನಗದು ಹಾಗೂ ವಾಹನದ ಒಟ್ಟು ಮೌಲ್ಯ– 11,00,000/- ರೂ ಎಂಬುದಾಗಿ ಪೊಲೀಸರು
ತಿಳಿಸಿದ್ದಾರೆ. ಪ್ರಕರಣದಲ್ಲಿ ಉಳಿದ ಆರೋಪಿಗಳ ದಸ್ತಗಿರಿಗೆ ಬಾಕಿ ಇರುತ್ತದೆ.


ಆರೋಪಿ ಪತ್ತೆಯ ಕಾರ್ಯಾಚರಣೆಯನ್ನು ದ.ಕ ಜಿಲ್ಲಾ
ಪೊಲೀಸ್ ಅಧೀಕ್ಷಕ ಯತೀಶ್ ಎನ್ ಐ.ಪಿ.ಎಸ್
ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಡಿ ಎಸ್ ರವರ
ಮಾರ್ಗದರ್ಶನದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯ ಪ್ರಸಾದ್ ರವರ ನಿರ್ದೇಶನದಂತೆ, ವಿಟ್ಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ನಾಗರಾಜ್ ಹೆಚ್ ಈ ರವರ ನೇತೃತ್ವದಲ್ಲಿ
ಪೊಲೀಸ್ ಉಪ ನಿರೀಕ್ಷಕ ನಂದಕುಮಾರ
ಎಂ ಎಂ, ಕೌಶಿಕ್ ಬಿ ಸಿ, ಹರೀಶ್
ಕುಮಾರ್, ರಾಮಕೃಷ್ಣ ,ವಿದ್ಯಾ ಕೆ.ಜೆ. ರತ್ನಕುಮಾರ,
ಸಿಬ್ಬಂದಿಗಳಾದ, ಪ್ರವೀಣ್ ಮೂರುಗೋಳಿ, ಉದಯ ರೈ, ರಕ್ಷಿತ್ ರೈ ಕೆ, ಅದ್ರಾಂ,
ಕರುಣಾಕರ, ರಾಹುಲ್ ರಾವ್, ಶ್ರೀಧರ ಸಿ ಎಸ್, ರಾಧಾಕೃಷ್ಣ,
ನಝೀರ್, ಇರ್ಷಾದ್ ಪಿ, ವಿನಾಯಕ ಬಾರ್ಕಿ, ರಂಜಾನ್,ಶಂಕರ ಸಂಶಿ, ಗದಿಗೆಪ್ಪ, ಮಂಜುನಾಥ,ಅಶೋಕ್, ವಿವೇಕ್ ಕೆ, ಕುಮಾರ್ ಹೆಚ್.ಕೆ, ಉಮೇಶ್,ಚಿದಾನಂದ,ಸಂಪತ್, ದಿವಾಕರ್, ಸಂತೋಷ್ ,ಕುಮಾರ್ ಮಾಯಪ್ಪರವರು ಭಾಗವಹಿಸಿದ್ದರು. ಈ ತಂಡಕ್ಕೆ ಪೊಲೀಸ್ ಅಧೀಕ್ಷಕರು ನಗದು ಬಹುಮಾನ ಘೋಷಿಸಿರುವುದಾಗಿ ತಿಳಿದು ಬಂದಿದೆ.