ಕುಮಾರಧಾರ ನದಿಯಿಂದ ಅಕ್ರಮ ಮರಳು ಸಾಗಾಟ |ಪಿಕ್‌ಅಪ್ ವಾಹನ ಜಪ್ತಿ | Subramanya Sand Theft Case

kadaba times

ಸುಬ್ರಹ್ಮಣ್ಯದ ಕೇನ್ಯ ಗ್ರಾಮದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಿಎನ್ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ

kadaba times
uniq

ಸುಬ್ರಹ್ಮಣ್ಯ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕ್‌ಅಪ್ ವಾಹನವನ್ನು ಸುಬ್ರಹ್ಮಣ್ಯ ಪೊಲೀಸರು ವಶಪಡಿಸಿಕೊಂಡು, ಚಾಲಕನನ್ನು ಬಂಧಿಸಿರುವ ಘಟನೆ ಕೇನ್ಯ ಗ್ರಾಮದ ಕಣ್ಕಲ್ ಎಂಬಲ್ಲಿ ನಡೆದಿದೆ.

ದಿನಾಂಕ 24-01-2026 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಉಪನಿರೀಕ್ಷಕರಾದ (ಕಾ & ಸು) ಆಂಜನೇಯ ರೆಡ್ಡಿ ಮತ್ತು ಸಿಬ್ಬಂದಿ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ಕೇನ್ಯ ಗ್ರಾಮದ ಕಣ್ಕಲ್ ಎಂಬಲ್ಲಿ ಕುಮಾರಧಾರ ನದಿಯ ದಡದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು.

kadaba times
kadaba times

ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು KA-21-A-0244 ನಂಬರಿನ ಪಿಕ್‌ಅಪ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ, ಯಾವುದೇ ಪರವಾನಿಗೆ ಇಲ್ಲದೆ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ.ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಈ ಕೆಳಗಿನ ವಸ್ತುಗಳನ್ನು ಜಪ್ತಿ ಮಾಡಲಾಗಿದೆ:ಮರಳು: ಅಂದಾಜು 1 ಟನ್ (ಮೌಲ್ಯ ಸುಮಾರು ₹4,000/-,ವಾಹನ: ಪಿಕ್‌ಅಪ್ ವಾಹನ (ಅಂದಾಜು ಮೌಲ್ಯ ₹1,50,000/-)  ಕೇನ್ಯ ಗ್ರಾಮದ ರೇಣುಕಾಪ್ರಸಾದ್ (31)  ಅಕ್ರಮವಾಗಿ ಮರಳು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2026, ಕಲಂ: 303(2) BNS-2023 ರಂತೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Related Articles

Latest Articles