ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಮೈಸೂರು ಸಂಸದ ಯದುವೀರ್ ಒಡೆಯರ್

ದೇವರ ದರ್ಶನ ಪಡೆದು ಪುನೀತರಾದ ರಾಜವಂಶಸ್ಥರು

kadaba times

ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ವಿಶ್ವ ಸಂಭ್ರಮ ಸಮ್ಮೇಳನದಲ್ಲಿ ಭಾಗವಹಿಸಿದ ಸಂಸದರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು

kadaba times
uniq

ಸುಬ್ರಹ್ಮಣ್ಯ: ನಾಗಾರಾಧನೆಯ ಪುಣ್ಯಕ್ಷೇತ್ರ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 27ರಂದು ಭಕ್ತಿಪೂರ್ವಕ ಭೇಟಿ ನೀಡಿದರು.

ಸುಬ್ರಹ್ಮಣ್ಯದ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿದ್ವತ್ ಸಮ್ಮೇಳನ – ವಿಶ್ವ ಸಂಭ್ರಮ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಸಂಸದರು, ಈ ಸಂದರ್ಭದಲ್ಲಿ ಕ್ಷೇತ್ರದ ಅಧಿದೇವತೆ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು.

ದೇವಳಕ್ಕೆ ಆಗಮಿಸಿದ ಸಂಸದರನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಇಂಜಾಡಿ ಹಾಗೂ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಅವರು ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯವಾಗಿ ಬರಮಾಡಿಕೊಂಡರು. ಶಾಸ್ತ್ರೋಕ್ತವಾಗಿ ನಡೆದ ಈ ಸ್ವಾಗತ ಪ್ರಕ್ರಿಯೆಯ ನಂತರ ಸಂಸದರು ಗರ್ಭಗುಡಿಯಲ್ಲಿ ದೇವರ ದರ್ಶನ ಪಡೆದು, ವಿಶೇಷ ಪ್ರಸಾದ ಸ್ವೀಕರಿಸಿದರು.

kadaba times
kadaba times

ಈ ಸಂದರ್ಭದಲ್ಲಿ ದೇವಸ್ಥಾನದ ಶಿಷ್ಟಾಚಾರ ವಿಭಾಗದ ಪ್ರಮುಖರಾದ ಜಯರಾಮ ರಾವ್,ಪ್ರಮೋದ್, ಗೋಪಿನಾಥ್ ಹಾಗೂ ದೇವಳದ ಇತರೆ ಸಿಬ್ಬಂದಿಗಳು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.

ಪಾರಂಪರಿಕ ಉಡುಗೆಯಲ್ಲಿ ಸರಳವಾಗಿ ದೇವಸ್ಥಾನಕ್ಕೆ ಭೇಟಿ ನೀಡಿದ ಯದುವೀರ್ ಒಡೆಯರ್ ಅವರ ಭೇಟಿಯು ಭಕ್ತರ ಗಮನ ಸೆಳೆಯಿತು. ರಾಜವಂಶಸ್ಥರ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ವತಿಯಿಂದ ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರದ ವ್ಯವಸ್ಥೆಗಳನ್ನು ಮಾಡಲಾಗಿತ್ತು.

Related Articles

Latest Articles