ದೀರ್ಘಕಾಲದ ಹೊಟ್ಟೆನೋವಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಕುದ್ಮಾರಿನ ವ್ಯಕ್ತಿ

kadaba times

ಕಡಬ ತಾಲೂಕಿನ ಕುದ್ಮಾರು ಗ್ರಾಮದ  ವ್ಯಕ್ತಿಯೊಬ್ಬರು  ದೀರ್ಘಕಾಲದ ಹೊಟ್ಟೆನೋವಿನಿಂದ ಬೇಸತ್ತು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kadaba times
uniq

ಬೆಳ್ಳಾರೆ: ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖವಾಗದ ಕಾರಣ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ.

ಘಟನೆಯ ವಿವರ: ಕುದ್ಮಾರು ಗ್ರಾಮದ ನಿವಾಸಿ ಬಾಬು ಗೌಡ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೂಲಿ ಕೆಲಸ ಮಾಡಿಕೊಂಡಿದ್ದ ಇವರು ಕಳೆದ 3 ತಿಂಗಳಿನಿಂದ ತೀವ್ರವಾದ ಹೊಟ್ಟೆನೋವು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರು. ಇದಕ್ಕೆ ಸೂಕ್ತ ಚಿಕಿತ್ಸೆ ಕೊಡಿಸಿದರೂ ಕಾಯಿಲೆ ಗುಣಮುಖವಾಗದೆ ಇರುವುದರಿಂದ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಜನವರಿ 27 ರಂದು ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:30 ರ ಅವಧಿಯಲ್ಲಿ ಬಾಬು ಗೌಡ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ, ಸ್ನಾನದ ಕೋಣೆಯ ಮಾಡಿನ ಕಬ್ಬಿಣದ ರಾಡ್‌ಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

kadaba times
kadaba times

 ಈ ಬಗ್ಗೆ ಮೃತರ ಪತ್ನಿ ಸುನಂದಾ (42) ಅವರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಬೆಳ್ಳಾರೆ ಪೊಲೀಸರು ಯುಡಿಆರ್ ಸಂಖ್ಯೆ: 04/2026, ಕಲಂ: 194-2023 ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಗಮನಿಸಿ: ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಮಾನಸಿಕ ಒತ್ತಡ ಅಥವಾ ಖಿನ್ನತೆಯಿದ್ದಲ್ಲಿ ಸಹಾಯಕ್ಕಾಗಿ ಆಪ್ತ ಸಮಾಲೋಚಕರನ್ನು ಅಥವಾ ಸಹಾಯವಾಣಿಯನ್ನು ಸಂಪರ್ಕಿಸಿ.

Related Articles

Latest Articles