Ramakunja Shooting Case Update | ವೈದ್ಯಕೀಯ ವರದಿಗಾಗಿ ಕಾಯುತ್ತಿರುವ ಪೊಲೀಸ್ ಇಲಾಖೆ

kadaba times

ದಕ್ಷಿಣ ಕನ್ನಡದ ರಾಮಕುಂಜದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣ ಕಗ್ಗಂಟಾಗಿದ್ದು, ಪೊಲೀಸರು ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದಾರೆ. ತಂದೆ-ಮಗನ ನಡುವೆ ನಡೆದಿದ್ದೇನು? ಸಂಪೂರ್ಣ ಮಾಹಿತಿ ಇಲ್ಲಿದೆ.

kadaba times
uniq

ರಾಮಕುಂಜ: ಆರು ದಿನಗಳ ಹಿಂದೆ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ನಡೆದ ಗುಂಡಿನ ಚಕಮಕಿ ಹಾಗೂ ಬಾಲಕನ ಸಾವಿನ ಪ್ರಕರಣ ಪೊಲೀಸ್ ಇಲಾಖೆಗೆ ಕಗ್ಗಂಟಾಗಿ ಪರಿಣಮಿಸಿದೆ. ಘಟನೆಗೆ ಸಂಬಂಧಿಸಿದಂತೆ ಗಾಯಾಳುವಿನ ವೈದ್ಯಕೀಯ ವರದಿ ಹಾಗೂ ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಜನವರಿ 24ರ ಸಂಜೆ ಪಾದೆ ನಿವಾಸಿ ಮೋಕ್ಷ್ (17 ವರ್ಷ) ಬಂದೂಕಿನ ಗುಂಡು ತಗುಲಿ ಮೃತಪಟ್ಟಿದ್ದರೆ, ಆತನ ತಂದೆ ವಸಂತ ಅಮೀನ್ (55 ವರ್ಷ) ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಆರಂಭದಲ್ಲಿ, ಮಗನೇ ತನ್ನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ನಂತರ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವಸಂತ ಅಮೀನ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಆದರೆ, ಘಟನೆಯ ವೇಳೆ ತವರು ಮನೆಯಲ್ಲಿದ್ದ ವಸಂತ ಅಮೀನ್ ಅವರ ಪತ್ನಿ ಜಯಶ್ರೀ ಮತ್ತು ಕುಟುಂಬದವರು ನೀಡಿದ ದೂರು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ವಸಂತ ಅಮೀನ್ ಅವರೇ ಮಗನನ್ನು ಕೊಲೆ ಮಾಡಿದ್ದಾರೆ ಎಂದು ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

kadaba times
kadaba times

ಈ ನಡುವೆ ಮತ್ತೊಂದು ಅಚ್ಚರಿಯ ಸಂಗತಿ ಹೊರಬಂದಿದ್ದು, ಗಾಯಗೊಂಡು ಆಸ್ಪತ್ರೆ ಸೇರಿರುವ ವಸಂತ ಅಮೀನ್ ಅವರ ದೇಹದಲ್ಲೂ ಬಂದೂಕಿನ ಗುಂಡುಗಳು ಪತ್ತೆಯಾಗಿವೆ ಎಂದು ಹೇಳಲಾಗುತ್ತಿದೆ. ಇದು ಪ್ರಕರಣದ ಗಂಭೀರತೆಯನ್ನು ಹೆಚ್ಚಿಸಿದೆ.

ಕುಟುಂಬ ಕಲಹದ ಹಿನ್ನೆಲೆಯಲ್ಲಿ ಮಗ ಮೋಕ್ಷ್ ತಂದೆಯ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದು, ಬಳಿಕ ತಂದೆಯ ಹೆಸರಿನ ಪರವಾನಗಿ ಹೊಂದಿರುವ ಬಂದೂಕಿನಿಂದ ತನ್ನ ಮುಖಕ್ಕೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಪ್ರಾಥಮಿಕವಾಗಿ ಅಂದಾಜಿಸಿದ್ದರು.

Related Articles

Latest Articles