
ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ತರೀಕೆರೆ ಮೂಲದ ವ್ಯಕ್ತಿ ಮಲಗಿದ್ದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚಿನ ವಿವರಗಳಿಗಾಗಿ ಓದಿ


ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಮಠದ ಗೋಶಾಲೆಯಲ್ಲಿ ಕಳೆದ ಐದು ವರ್ಷಗಳಿಂದ ಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿದ್ದ ಮಹಾಲಿಂಗಪ್ಪ (60) ಅವರು ಫೆಬ್ರವರಿ 20ರಂದು ರಾತ್ರಿ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ಮಹಾಲಿಂಗಪ್ಪ ಅವರು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಗೊಲ್ಲರಹಟ್ಟಿ ನಿವಾಸಿಯಾಗಿದ್ದರು. ಗೋಶಾಲೆಯಲ್ಲೇ ವಾಸ್ತವ್ಯವಿದ್ದ ಇವರು, ಎಂದಿನಂತೆ ಫೆ. 20ರಂದು ರಾತ್ರಿ ಮಲಗಿದ್ದರು. ಆದರೆ, ಮರುದಿನ ಬೆಳಿಗ್ಗೆ ಬಹಳ ಹೊತ್ತಾದರೂ ಅವರು ಏಳದಿದ್ದಾಗ ಸಂಶಯಗೊಂಡ ಸಹೋದ್ಯೋಗಿಗಳು ವೈದ್ಯರನ್ನು ಸ್ಥಳಕ್ಕೆ ಕರೆಸಿದ್ದಾರೆ.


ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
