ಕಡಬದಲ್ಲಿ ಕಾಡು ಕೋಣ ಬೇಟೆ ಕೇಸ್: ಅರಣ್ಯ ಸಚಿವರು ಸೂಕ್ತ ಆದೇಶ ಹೊರಡಿಸಬೇಕು – ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಅಧ್ಯಕ್ಷ ಆಗ್ರಹ

ಅರಣ್ಯ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿದ್ರೆ ಖದೀಮರು ಪತ್ತೆಯಾಗ್ತರೆ

kadaba times

 ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿದಾಗ ಬೇಟೆಯಾಡಿದ ಖದೀಮರು ಪತ್ತೆಯಾಗುತ್ತಾರೆ ಈ ಕೂಡಲೇ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸೂಕ್ತ ಆದೇಶ ಹೊರಡಿಸಬೇಕೆಂದು  ಮಾಲತೇಶ್ ಅರಸ್ ಆಗ್ರಹಿಸಿದ್ದಾರೆ.

kadaba times
uniq

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ  ಸುಬ್ರಹ್ಮಣ್ಯ ಸಮೀಪದ ಐತ್ತೂರು ಗ್ರಾಮದ ಪರಿಸರದ ವ್ಯಾಪ್ತಿಯಲ್ಲಿ ಕಾಟಿ (ಕಾಡೆಮ್ಮೆ) ಅಕ್ರಮ ಬೇಟೆ ಪ್ರಕರಣ ನಡೆದಿದ್ದು ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸಬೇಕೆಂದು  ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ  ಮಾಲತೇಶ್ ಅರಸ್ ಆಗ್ರಹಿಸಿದ್ದಾರೆ.

ಸ್ಥಳೀಯ ಅರಣ್ಯಾಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಅರಣ್ಯ ಭವನದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ  ವನ್ಯಜೀವಿ ಪರಿಪಾಲಕ ಬಿಶ್ವಜಿತ್ ಮಿಶ್ರ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಬೆನ್ನಲ್ಲೇ ಈ ಆಗ್ರಹ ಕೇಳಿ ಬಂದಿದೆ.

ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿದಾಗ ಬೇಟೆಯಾಡಿದ ಖದೀಮರು ಪತ್ತೆಯಾಗುತ್ತಾರೆ ಈ ಕೂಡಲೇ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಸೂಕ್ತ ಆದೇಶ ಹೊರಡಿಸಬೇಕೆಂದು  ಮಾಲತೇಶ್ ಅರಸ್ ಆಗ್ರಹಿಸಿದ್ದಾರೆ.

kadaba times
kadaba times

ಕಡಬದ ಸಾಮಾಜಿಕ ಕಾರ್ಯಕರ್ತರೊಬ್ಬರು    ಸಲ್ಲಿಸಿದ ದೂರಿನಲ್ಲಿ, ಸ್ಥಳೀಯ ಅಧಿಕಾರಿಗಳು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ನಿಯಮಗಳನ್ನು ಗಾಳಿಗೆ ತೂರಿ ತನಿಖೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ದೂರನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಬಿಶ್ವಜಿತ್ ಮಿಶ್ರ ಅವರ ಕಚೇರಿ, ಮಂಗಳೂರು ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದು ತಕ್ಷಣದ ಕ್ರಮಕ್ಕೆ ಸೂಚನೆ ನೀಡಿದ್ದರು.

ಅರ್ಜಿದಾರರು ನೀಡಿರುವ ದೂರಿನಲ್ಲಿರುವ ಅಂಶಗಳನ್ನು ನಿಯಮಾನುಸಾರ ಕೂಲಂಕಷವಾಗಿ ಪರಿಶೀಲಿಸಿ  ಲೋಪವಾಗಿರುವುದು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಜರುಗಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.  ಅಷ್ಟೇ ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಬಗ್ಗೆ ಅರ್ಜಿದಾರರಿಗೆ ಪಾರದರ್ಶಕವಾಗಿ ಮಾಹಿತಿ ಒದಗಿಸುವುದರ ಜೊತೆಗೆ ಕೇಂದ್ರ ಕಚೇರಿಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.

Related Articles

Latest Articles