Liquor Seized-ಬೆಳ್ಳಾರೆ ಪೊಲೀಸರ ಕಾರ್ಯಾಚರಣೆ: ಕೊಟ್ಟಿಗೆಯಲ್ಲಿ ಅಡಗಿಸಿಟ್ಟಿದ್ದ ಮದ್ಯದ ಸ್ಯಾಚೆಟ್‌ಗಳು ಜಪ್ತಿ:ಕತ್ತಲಲ್ಲಿ ಮಹಿಳೆ ಪರಾರಿ!

kadaba times

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನೆಗೆ ಬೆಳ್ಳಾರೆ ಪೊಲೀಸರು ದಾಳಿ ನಡೆಸಿ, ಭಾರಿ ಪ್ರಮಾಣದ ಮದ್ಯದ ಸ್ಯಾಚೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

kadaba times
uniq

ಬೆಳ್ಳಾರೆ: ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಜೋಗಿಬೆಟ್ಟು ಎಂಬಲ್ಲಿ ಮನೆಯೊಂದರಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಅಡ್ಡೆಯ ಮೇಲೆ ಬೆಳ್ಳಾರೆ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಧಿಕ  ಮೌಲ್ಯದ ಮದ್ಯದ ಸ್ಯಾಚೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ದಿನಾಂಕ 27-02-2026 ರಂದು ಸಂಜೆ ವೇಳೆ ಬೆಳ್ಳಾರೆ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ ಅವರಿಗೆ ಕಲ್ಮಡ್ಕದ ಜೋಗಿಬೆಟ್ಟಿನ ಮನೆಯೊಂದರಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ಸುಮಾರು 9:25 ರ ವೇಳೆಗೆ ಸ್ಥಳಕ್ಕೆ ಧಾವಿಸಿದರು.

ಪೊಲೀಸರ ವಾಹನ ಬರುತ್ತಿದ್ದಂತೆಯೇ ಮನೆಯಲ್ಲಿದ್ದ ಮಹಿಳೆಯೊಬ್ಬರು ಕತ್ತಲಲ್ಲಿ ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಚಂದ್ರಾವತಿ ಎಂಬವರನ್ನು ವಿಚಾರಿಸಿದಾಗ, ಪರಾರಿಯಾದವರು ತನ್ನ ತಂಗಿ ಸುಲೋಚನಾ ಎಂದು ಹಾಗೂ ಆಕೆ ಯಾವುದೇ ಪರವಾನಿಗೆ ಇಲ್ಲದೆ ಮದ್ಯ ಮಾರಾಟ ಮಾಡುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ.

kadaba times
kadaba times

ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿ ಅಡಗಿಸಿಟ್ಟಿದ್ದ ಮದ್ಯವನ್ನು ಪೊಲೀಸರು ಪಂಚರ ಸಮಕ್ಷಮ ವಶಕ್ಕೆ ಪಡೆದಿದ್ದಾರೆ.ಮೊದಲ ಬಾಕ್ಸ್: 90 ML ನ 96 ಮದ್ಯದ ಸ್ಯಾಚೆಟ್‌ಗಳು (JOHNS Original Choice Deluxe Whisky).ಎರಡನೇ ಬಾಕ್ಸ್: 90 ML ನ 81 ಮದ್ಯದ ಸ್ಯಾಚೆಟ್‌ಗಳು.ಒಟ್ಟು ಸುಮಾರು 15.93 ಲೀಟರ್‌ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ 9,000 ರೂಪಾಯಿ ಎಂದು ತಿಳಿದುಬಂದಿದೆ. ಮಾದರಿಗಾಗಿ ಕೆಲವು ಸ್ಯಾಚೆಟ್‌ಗಳನ್ನು ಪ್ರತ್ಯೇಕಿಸಿ ಸೀಲು ಮಾಡಲಾಗಿದ್ದು, ಉಳಿದ ಮದ್ಯವನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ಮಹಜರು ನಡೆಸಲಾಗಿದೆ.

ಈ ಅಕ್ರಮ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 17/2026 ರಂತೆ, ಕರ್ನಾಟಕ ಅಬಕಾರಿ ಕಾಯ್ದೆಯ ಕಲಂ 32 ಹಾಗೂ 34 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಸುಲೋಚನಾ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Related Articles

Latest Articles