Rat Poison-ಮನನೊಂದ ಕಡಬದ ನರ್ಸಿಂಗ್ ವಿದ್ಯಾರ್ಥಿನಿ ಉಡುಪಿಯಲ್ಲಿ ಆತ್ಮಹತ್ಯೆಗೆ ಯತ್ನ:ಚಿಕಿತ್ಸೆ ಫಲಿಸದೆ ಮೃತ್ಯು

kadaba times

ಗಮನಿಸಿ: ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ನಿಮಗೆ ಯಾವುದೇ ಮಾನಸಿಕ ಒತ್ತಡ ಅಥವಾ ಸಮಸ್ಯೆಗಳಿದ್ದಲ್ಲಿ ಸಹಾಯಕ್ಕಾಗಿ ಈ ಸಹಾಯವಾಣಿಗಳನ್ನು ಸಂಪರ್ಕಿಸಿ: ಆರೋಗ್ಯ ಸಹಾಯವಾಣಿ: 104 ಅಥವಾ ಸಹಾಯ್ (Sahai): 080-25497777.

kadaba times
uniq

ವೈಯಕ್ತಿಕ ಕಾರಣಗಳಿಂದಾಗಿ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಎಂಬವರ ಪುತ್ರಿ ಸ್ವೀಟಿ (18) ಎಂದು ಗುರುತಿಸಲಾಗಿದೆ. ಈಕೆ ಉಡುಪಿಯ ಖಾಸಗಿ ಕಾಲೇಜೊಂದರಲ್ಲಿ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಾಲೇಜಿನ ವಸತಿ ನಿಲಯದಲ್ಲೇ ವಾಸ್ತವ್ಯ ಹೂಡಿದ್ದರು.

ಫೆಬ್ರವರಿ 25ರಂದು ರಾತ್ರಿ ತರಗತಿ ಮುಗಿಸಿ ವಸತಿ ನಿಲಯಕ್ಕೆ ಮರಳಿದ್ದ ಸ್ವೀಟಿ, ಅಲ್ಲಿಯೇ ಇಲಿ ಪಾಷಣ (Rat Poison) ಸೇವಿಸಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸಹಪಾಠಿಗಳು ಮತ್ತು ಕಾಲೇಜು ಮಂಡಳಿಯವರು ತಕ್ಷಣವೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.ಗಮನಿಸಿ: ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ನಿಮಗೆ ಯಾವುದೇ ಮಾನಸಿಕ ಒತ್ತಡ ಅಥವಾ ಸಮಸ್ಯೆಗಳಿದ್ದಲ್ಲಿ ಸಹಾಯಕ್ಕಾಗಿ ಈ ಸಹಾಯವಾಣಿಗಳನ್ನು ಸಂಪರ್ಕಿಸಿ: ಆರೋಗ್ಯ ಸಹಾಯವಾಣಿ: 104 ಅಥವಾ ಸಹಾಯ್ (Sahai): 080-25497777.

kadaba times
kadaba times

ಚಿಕಿತ್ಸೆ ಫಲಕಾರಿಯಾಗದ ಸಾವು: ಆಕೆಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಕಳೆದ ಕೆಲವು ದಿನಗಳಿಂದ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಮಾರ್ಚ್ 3ರಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ವೈಯಕ್ತಿಕ ಕಾರಣಗಳಿಂದಾಗಿ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.ಗಮನಿಸಿ: ಆತ್ಮಹತ್ಯೆ ಯಾವುದಕ್ಕೂ ಪರಿಹಾರವಲ್ಲ. ನಿಮಗೆ ಯಾವುದೇ ಮಾನಸಿಕ ಒತ್ತಡ ಅಥವಾ ಸಮಸ್ಯೆಗಳಿದ್ದಲ್ಲಿ ಸಹಾಯಕ್ಕಾಗಿ ಈ ಸಹಾಯವಾಣಿಗಳನ್ನು ಸಂಪರ್ಕಿಸಿ: ಆರೋಗ್ಯ ಸಹಾಯವಾಣಿ: 104 ಅಥವಾ ಸಹಾಯ್ (Sahai): 080-25497777.

Related Articles

Latest Articles