ನೆಲ್ಯಾಡಿ: ತೋಟಕ್ಕೆ ಬಂದ ಜಾನುವಾರು ಓಡಿಸಲು ಹೋಗಿ ಜೀವ ಕಳೆದುಕೊಂಡ ಮಹಿಳೆ

kadaba times

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಜಾನುವಾರುಗಳನ್ನು ಓಡಿಸಲು ಹೋದ ಲೀಲಾವತಿ ಶೆಟ್ಟಿ (64) ಎಂಬುವವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಘಟನೆಯ ಸಂಪೂರ್ಣ ವಿವರ ಇಲ್ಲಿದೆ

kadaba times
uniq

ನೆಲ್ಯಾಡಿ: ತೋಟಕ್ಕೆ ಮೇಯಲು ಬಂದ ಜಾನುವಾರುಗಳನ್ನು ಓಡಿಸಲು ಹೋದ ವೇಳೆ ಆಕಸ್ಮಿಕವಾಗಿ ನೆಲಕ್ಕೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದ ಪಾತೃವಾಡಿಯಲ್ಲಿ ನಡೆದಿದೆ.

ಕೊಣಾಲು ಗ್ರಾಮದ ನಿವಾಸಿ ಲೀಲಾವತಿ ಶೆಟ್ಟಿ (64ವ.) ಮೃತಪಟ್ಟ ದುರ್ದೈವಿ.

ಮೃತ ಲೀಲಾವತಿ ಅವರ ಪುತ್ರ ಹರೀಶ್ ಅವರು ಲಾರಿ ಚಾಲಕರಾಗಿದ್ದು, ಮಾರ್ಚ್ 11ರಂದು ರಾತ್ರಿ ಮನೆಗೆ ಬಂದಾಗ ಬಾಗಿಲು ತೆರೆದಿತ್ತು. ಆದರೆ ತಾಯಿ ಮನೆಯಲ್ಲಿ ಇರಲಿಲ್ಲ. ಗಾಬರಿಗೊಂಡ ಹರೀಶ್ ಅವರು ನೆರೆಮನೆಯವರ ಸಹಾಯದೊಂದಿಗೆ ಹುಡುಕಾಟ ನಡೆಸಿದಾಗ, ತೋಟದಲ್ಲಿ ಲೀಲಾವತಿ ಅವರು ಬಿದ್ದು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

kadaba times
kadaba times

ಮೃತದೇಹ ಪತ್ತೆಯಾದಾಗ ಅವರ ಒಂದು ಕೈಯಲ್ಲಿ ಕಲ್ಲು ಹಾಗೂ ಇನ್ನೊಂದು ಕೈಯಲ್ಲಿ ದೊಣ್ಣೆ ಇತ್ತು ಎನ್ನಲಾಗಿದೆ. ಮಾ. 11ರಂದು ಸಂಜೆ ತೋಟಕ್ಕೆ ನುಗ್ಗಿದ ಜಾನುವಾರುಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಅವರು ಆಕಸ್ಮಿಕವಾಗಿ ಜಾರಿ ಬಿದ್ದಿದ್ದಾರೆ. ಈ ವೇಳೆ ಕೈಯಲ್ಲಿದ್ದ ಕಲ್ಲೇ ಅವರ ಹಣೆಗೆ ಬಲವಾಗಿ ತಗುಲಿ ಗಂಭೀರ ಗಾಯಗೊಂಡಿದ್ದರಿಂದ ಅವರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಜಾನುವಾರುಗಳ ಉಪಟಳಕ್ಕೆ ಸಾರ್ವಜನಿಕರ ಆಕ್ರೋಶ:

ಕೊಣಾಲು ಗ್ರಾಮದ ತಿರ್ಲೆ ಪರಿಸರದಲ್ಲಿ ಜಾನುವಾರುಗಳ ಹಾವಳಿ ಮಿತಿಮೀರಿದೆ ಎಂಬ ಆರೋಪ ಕೇಳಿಬಂದಿದೆ. ಒಂದೇ ಮನೆಯವರಿಗೆ ಸೇರಿದ ಸುಮಾರು 50ಕ್ಕೂ ಹೆಚ್ಚು ಜಾನುವಾರುಗಳು ಬಿಡಾಡಿಯಾಗಿ ತಿರುಗುತ್ತಿದ್ದು, ಸ್ಥಳೀಯರ ಕೃಷಿ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿವೆ. ಅಲ್ಲದೆ, ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೂ ಇವು ತೊಂದರೆ ನೀಡುತ್ತಿವೆ ಎಂದು ಸ್ಥಳೀಯರು ದೂರಿದ್ದಾರೆ.

ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಜಾನುವಾರುಗಳ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Related Articles

Latest Articles