ಗುಂಡ್ಯ ಬಳಿ ಭೀಕರ ಅಪಘಾತ; ಕಾರಿನಲ್ಲಿದ್ದ ಮೂವರ ದುರ್ಮರಣ

kadaba times

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

kadaba times
uniq

ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು-ಬೆಂಗಳೂರು ರಸ್ತೆಯ ಗುಂಡ್ಯ ಸಮೀಪ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ದಾರುಣ ಅಪಘಾತವೊಂದು ಮೂರು ಜೀವಗಳನ್ನು ಬಲಿಪಡೆದಿದೆ.

ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಈ ಮುಖಾಮುಖಿ ಡಿಕ್ಕಿ, ಕ್ಷಣಾರ್ಧದಲ್ಲಿ ಸುಂದರ ಬದುಕನ್ನು ಛಿದ್ರಗೊಳಿಸಿದೆ.ಕಾರಿನಲ್ಲಿದ್ದ ಮಾಜಿ ಎಪಿಎಂಸಿ ಸದಸ್ಯ ಚಂದ್ರಶೇಖರ ಶಿಶಿಲ, ಜನಾರ್ದನ ಗೌಡ ಕೇರಿಮಾರ್ ಉಜಿರೆ, ಕಕ್ಕಿಂಜೆ ಫೈನಾನ್ಸ್‌ ನ ಶ್ರೀಧರ ಗೌಡ ಮರಕಡ ಅರಳಿ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಕಾರಿನಲ್ಲಿದ್ದ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಉಜಿರೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ.

kadaba times
kadaba times

ಗುಂಡ್ಯದ ಗಡಿ ದೇವಸ್ಥಾನದ ಸಮೀಪ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕರು ರಕ್ತಸಿಕ್ತವಾಗಿದ್ದವರನ್ನು   ಸ್ಥಳೀಯರ ನೆರವಿನೊಂದಿಗೆ ಹೊರತೆಗೆಯುವ ಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಆಗಮಿಸಿದ್ದಾರೆ.

Related Articles

Latest Articles