ಸಂಘದ ಠೇವಣಿ ರಶೀದಿ ಕಳವು ಮಾಡಿ ಕೋಟಿ ರೂ ವಂಚನೆ: ಕೃಷಿಪತ್ತಿನ ಸಹಕಾರಿ ಸಂಘದ ಸಿಬ್ಬಂದಿ ಅರೆಸ್ಟ್

kadaba times

ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನಡೆದ 2.12 ಕೋಟಿ ರೂಪಾಯಿಗಳ ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಎರಡನೇ ಆರೋಪಿ ಪ್ರಶಾಂತ್‌ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

kadaba times
uniq

ಉಜಿರೆ:   ಇಲ್ಲಿನ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ನಡೆದಿದೆ ಎನ್ನಲಾದ ಸುಮಾರು 2.12 ಕೋಟಿ ರೂಪಾಯಿಗಳ ಬೃಹತ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಎರಡನೇ ಆರೋಪಿ ಪ್ರಶಾಂತ್ ಬಿ. ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬೆಳಾಲು ಕೃಷಿಪತ್ತಿನ ಸಹಕಾರಿ ಸಂಘದಲ್ಲಿ 2022ರ ಫೆಬ್ರವರಿ 18 ರಿಂದ 2025ರ ಮಾರ್ಚ್ 25ರ ನಡುವಿನ ಅವಧಿಯಲ್ಲಿ ಒಟ್ಟು 2,12,08,328.15 ರೂ. ಗಳ ಹಣ ದುರುಪಯೋಗವಾಗಿದೆ ಎಂದು ಸಂಘದ ಅಧ್ಯಕ್ಷ ಪದ್ಮಗೌಡ ಅವರು ದೂರು ನೀಡಿದ್ದರು. ಈ ವಂಚನೆಯಲ್ಲಿ ಸಂಘದ ಸಿಬ್ಬಂದಿಗಳೇ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಈ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಸದಾಶಿವ ಯಾನೆ ಸುಜಿತ್ ಇವರನ್ನು ಪೊಲೀಸರು ಈ ಹಿಂದೆಯೇ ಬಂಧಿಸಿ ತನಿಖೆಗೊಳಪಡಿಸಿದ್ದರು. ಪ್ರಶಾಂತ್ ಬಿ  ಸಂಘದ ಠೇವಣಿ ರಶೀದಿಗಳನ್ನು ಕಳವು ಮಾಡಿ, ವಿವಿಧ ಮೂಲಗಳಿಂದ ಹಣ ವಂಚಿಸಿದ್ದ ಎನ್ನಲಾಗಿದೆ.

kadaba times
kadaba times

ಪ್ರಕರಣ ದಾಖಲಾದಾಗಿನಿಂದ ಪ್ರಶಾಂತ್ ತಲೆಮರೆಸಿಕೊಂಡಿದ್ದ. ಪೊಲೀಸರು ಆತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಧರ್ಮಸ್ಥಳ ಪೊಲೀಸರು, ಪ್ರಶಾಂತ್‌ನನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ಪ್ರಕರಣದ ಇಬ್ಬರೂ ಪ್ರಮುಖ ಆರೋಪಿಗಳು ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಸಹಕಾರಿ ಸಂಘದ ನಂಬಿಕೆಗೆ ದ್ರೋಹ ಬಗೆದು ಕೋಟ್ಯಂತರ ರೂಪಾಯಿ ವಂಚಿಸಿದ ಈ ಪ್ರಕರಣವು ಸ್ಥಳೀಯವಾಗಿ ದೊಡ್ಡ ಸಂಚಲನ ಮೂಡಿಸಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Related Articles

Latest Articles