Breaking-ಯೇನೆಕಲ್ಲು: ಮಾಗಣೆ ಗೌಡರ ಕುಟುಂಬದ ಕೊಂಡಿ ಆತ್ಮಹತ್ಯೆಗೆ ಶರಣು

kadaba times

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲು ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ.

kadaba times
uniq

ಯೇನೆಕಲ್ಲು ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಶ್ರೀ ಉಳ್ಳಾಕುಲು, ಉಳ್ಳಾಳ್ತಿ ಮತ್ತು ಬಚ್ಚನಾಯಕ ದೈವಸ್ಥಾನದಲ್ಲಿ ದಶಕಗಳ ಕಾಲ ಮಾಗಣೆ ಗೌಡರಾಗಿ ಸೇವೆ ಸಲ್ಲಿಸಿದ್ದ ದಿ. ಆನಂದ ಗೌಡರ ಪುತ್ರ ಮನೋಜ್ (42) ಎಂಬವರು ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯ ವಿವರ: ಯೇನೆಕಲ್ಲು ಗ್ರಾಮದ ಬಾನಡ್ಕ ನಿವಾಸಿಯಾದ ಮನೋಜ್ ಅವರು ಇಂದು ಮುಂಜಾನೆ ತಮ್ಮ ಮನೆಯ ಮೇಲ್ಛಾವಣಿಯ ಪಕ್ಕಾಸಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

kadaba times
kadaba times

ಪ್ರಾಥಮಿಕ ಮಾಹಿತಿ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಲಾದ ದೂರಿನ ಅನ್ವಯ, ಮನೋಜ್ ಅವರು ಕಳೆದ ಕೆಲವು ಸಮಯದಿಂದ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದೇ ಮನಸ್ತಾಪ ಅಥವಾ ಸಂಕಷ್ಟಕ್ಕೆ ಮನನೊಂದು ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ತಾಯಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು, ಇಬ್ಬರು ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮಾಗಣೆ ಗೌಡರ ಕುಟುಂಬದ ಕೊಂಡಿಯಾಗಿದ್ದ ಮನೋಜ್ ಅವರ ನಿಧನಕ್ಕೆ ಗ್ರಾಮಸ್ಥರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Related Articles

Latest Articles