ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ; 112 ಪೊಲೀಸರ ಸಮಯಪ್ರಜ್ಞೆ

kadaba times

ಸುಳ್ಯ: ತಾಲ್ಲೂಕಿನ ಅಮರ ಮುಡ್ನೂರು ಗ್ರಾಮದ ಕೂಟೇಲು ಎಂಬಲ್ಲಿ ವ್ಯಕ್ತಿಯೊಬ್ಬರು ಇಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಏಪ್ರಿಲ್ 3ರಂದು ರಾತ್ರಿ ನಡೆದಿದೆ. ಪೊಲೀಸರ ಸಕಾಲಿಕ ಸ್ಪಂದನೆಯಿಂದಾಗಿ ವ್ಯಕ್ತಿಯ ಪ್ರಾಣ ಉಳಿದಿದೆ.

kadaba times
uniq

ಘಟನೆಯ ವಿವರ: ಅಮರ ಮುಡ್ನೂರು ಗ್ರಾಮದ ಕೂಟೇಲು ನಿವಾಸಿ ಶಶಿಕುಮಾರ್ ಎಂಬುವರೇ ಆತ್ಮಹತ್ಯೆಗೆ ಯತ್ನಿಸಿದವರು. ಇವರು ಬುಧವಾರ ರಾತ್ರಿ ಇಲಿ ವಿಷ (ರೆಂಟೆಕ್) ಸೇವಿಸಿದ್ದು, ವಿಷಯ ತಿಳಿದ ತಕ್ಷಣ ಮನೆಯವರು ಆತಂಕಗೊಂಡು ಕೂಡಲೇ ‘112’ ತುರ್ತು ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಪೊಲೀಸರ ಮಿಂಚಿನ ಕಾರ್ಯಾಚರಣೆ: ಕರೆ ಸ್ವೀಕರಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ 112 ಪೊಲೀಸ್ ಸಿಬ್ಬಂದಿಗಳು, ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಶಶಿಕುಮಾರ್ ಅವರನ್ನು ತಕ್ಷಣವೇ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಕಾಲದಲ್ಲಿ ಚಿಕಿತ್ಸೆ ಲಭ್ಯವಾದ ಕಾರಣ ಶಶಿಕುಮಾರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

kadaba times
kadaba times

ಕಾರಣ ನಿಗೂಢ: ಶಶಿಕುಮಾರ್ ಅವರು ವಿವಾಹಿತರಾಗಿದ್ದು, ಪತ್ನಿ ಮತ್ತು ಮಕ್ಕಳನ್ನು ಹೊಂದಿದ್ದಾರೆ. ಆದರೆ ಅವರು ಪತ್ನಿ, ಮಕ್ಕಳಿಂದ ದೂರವಾಗಿ ಬೇರೆ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇವರು ಆತ್ಮಹತ್ಯೆಗೆ ಯತ್ನಿಸಲು ನಿಖರವಾದ ಕಾರಣವೇನೆಂದು ಇನ್ನು ತಿಳಿದುಬಂದಿಲ್ಲ. ಪೊಲೀಸ್ ಸಿಬ್ಬಂದಿಯ ಈ ಸಮಯೋಚಿತ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

Related Articles

Latest Articles