ಟ್ರಕ್ಕಿಂಗ್ ತೆರಳಿದ್ದ ಪುತ್ತೂರಿನ ವಿದ್ಯಾರ್ಥಿ ಗುಡ್ಡದಿಂದ ಜಾರಿಬಿದ್ದು ಮೃತ್ಯು

kadaba times

ಮೂಡುಬಿದಿರೆಯ  ಕೊಣಾಜೆಕಲ್ಲು ಗುಡ್ಡಕ್ಕೆ ಟ್ರಕ್ಕಿಂಗ್ ತೆರಳಿದ್ದ ವೇಳೆ ಆಕಸ್ಮಿಕವಾಗಿ ಜಾರಿ ಬಿದ್ದು  ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.

kadaba times
uniq

ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಎಂಬವರ ಪುತ್ರ ಮನೋಜ್ ಎನ್. (22) ಮೃತಪಟ್ಟವರು.

ಮಂಗಳೂರಿನ ಸಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕೇರಳ ಅಡೂರು ನಿವಾಸಿ ಕಾರ್ತಿಕ್(22) ಹಾಗೂ ಮನೋಜ್ ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್ಗೆ ತೆರಳಿದ್ದರು ಎನ್ನಲಾಗಿದೆ.

kadaba times
kadaba times

ಈ ವೇಳೆ ಮನೋಜ್ ಆಕಸ್ಮಿಕವಾಗಿ ಗುಡ್ಡದಿಂದ ಜಾರಿಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Related Articles

Latest Articles