ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

kadaba times

2025ರಲ್ಲಿ ಉಜಿರೆಯಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ

kadaba times
uniq

ಕಳೆದ ವರ್ಷ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಳ್ತಂಗಡಿ ಪೊಲೀಸರು ಬೆಂಗಳೂರಿನಲ್ಲಿ ಇಂದು (ಏಪ್ರಿಲ್ 15) ಬಂಧಿಸಿದ್ದಾರೆ.

ಕಳೆದ 2025ರಲ್ಲಿ ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರ ಬೆಂಬಲಿಗರ ನಡುವೆ ದೊಡ್ಡ ಮಟ್ಟದ ಗಲಾಟೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪುನೀತ್ ಕೆರೆಹಳ್ಳಿ ಅವರ ಹೆಸರೂ ಕೇಳಿಬಂದಿತ್ತು.

ಈ ಪ್ರಕರಣದ ತನಿಖೆಗಾಗಿ ಬೆಳ್ತಂಗಡಿ ಪೊಲೀಸರು ಹಲವು ಬಾರಿ ಪುನೀತ್ ಕೆರೆಹಳ್ಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ, ಪುನೀತ್ ಪೊಲೀಸರ ನೋಟಿಸ್‌ಗೆ ಸರಿಯಾಗಿ ಸ್ಪಂದಿಸಿರಲಿಲ್ಲ ಎನ್ನಲಾಗಿದೆ. ಇದರಿಂದಾಗಿ ಪೊಲೀಸರು ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ (Warrant) ಪಡೆದುಕೊಂಡಿದ್ದರು.

kadaba times
kadaba times
ಬೆಂಗಳೂರಲ್ಲಿ ನಡೆದ ಕಾರ್ಯಾಚರಣೆ

ನ್ಯಾಯಾಲಯದ ವಾರಂಟ್ ಬೆನ್ನಲ್ಲೇ ಸಕ್ರಿಯರಾದ ಬೆಳ್ತಂಗಡಿ ಪೊಲೀಸರ ತಂಡ, ಏಪ್ರಿಲ್ 15ರಂದು ಬೆಂಗಳೂರಿಗೆ ತೆರಳಿ ಅಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸದ್ಯ ಬಂಧಿತ ಆರೋಪಿಯನ್ನು ಬೆಳ್ತಂಗಡಿಗೆ ಕರೆತರಲಾಗುತ್ತಿದೆ.  “ಬಂಧಿತ ಪುನೀತ್ ಕೆರೆಹಳ್ಳಿಯನ್ನು ಇಂದು ಸಂಜೆ ವೇಳೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತರಲಾಗುವುದು. ಅಲ್ಲಿ ವಿಚಾರಣೆ ನಡೆಸಿದ ಬಳಿಕ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು  ಹೇಳಿವೆ.

ಈ ಬಂಧನ ಪ್ರಕರಣವು ಕರಾವಳಿ ಮತ್ತು ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.

Related Articles

Latest Articles