ವೃದ್ಧೆಯ ಮೇಲೆ ಹಲ್ಲೆ ಆರೋಪ; ಸುಬ್ರಹ್ಮಣ್ಯದ ಮಹಿಳೆಯ ವಿರುದ್ಧ ಕಡಬ ಠಾಣೆಯಲ್ಲಿ FIR ದಾಖಲು

kadaba times

ಕ್ಷುಲ್ಲಕ ಕಾರಣಕ್ಕೆ ವೃದ್ಧೆಯೊಬ್ಬರನ್ನು ತಳ್ಳಿ ಗಾಯಗೊಳಿಸಿದ ಆರೋಪದ ಮೇಲೆ ಸುಬ್ರಹ್ಮಣ್ಯ ಮೂಲದ ಮಹಿಳೆಯೊಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

kadaba times
uniq

ಕಡಬ: ಕ್ಷುಲ್ಲಕ ಕಾರಣಕ್ಕೆ ವೃದ್ಧೆಯೊಬ್ಬರನ್ನು ತಳ್ಳಿ ಗಾಯಗೊಳಿಸಿದ ಆರೋಪದ ಮೇಲೆ ಸುಬ್ರಹ್ಮಣ್ಯ ಮೂಲದ ಮಹಿಳೆಯೊಬ್ಬರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಐತ್ತೂರು ಗ್ರಾಮದ ನೆಲ್ಲಿಕಟ್ಟೆ ನಿವಾಸಿ, ರಬ್ಬರ್ ಗೋಡನ್‌ನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿರುವ ಪೂರ್ಣಜ್ಯೋತಿ (53) ಎಂಬುವವರು ಹಲ್ಲೆಗೊಳಗಾದವರು. ಇವರ ಮಗ ಪ್ರಭಾಕರ್ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ.

ದಿನಾಂಕ 03-04-2026ರಂದು ರಾತ್ರಿ  ಸೋನಿಕಾ ಪ್ರಸನ್ನ ಎಂಬ ಮಹಿಳೆ ಪ್ರಭಾಕರ್ ಅವರ ಮನೆಗೆ ಬಂದು ಯಾವುದೋ ವಿಚಾರವಾಗಿ ಜಗಳವಾಡುತ್ತಿದ್ದರು. ಈ ವೇಳೆ ಜಗಳ ಬಿಡಿಸಲು ಹೋದ ಪೂರ್ಣಜ್ಯೋತಿ ಅವರನ್ನು ಸೋನಿಕಾ ಅವರು ಕೈಯಿಂದ ತಳ್ಳಿದ್ದಾರೆನ್ನಲಾಗಿದೆ. ಇದರ ಪರಿಣಾಮವಾಗಿ ಪೂರ್ಣಜ್ಯೋತಿ ಅವರು ನೆಲಕ್ಕೆ ಬಿದ್ದು ಸೊಂಟದ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ.

kadaba times
kadaba times

 ಘಟನೆಯ ನಂತರ ತಲೆಸುತ್ತು ಮತ್ತು ಸೊಂಟದ ನೋವಿನಿಂದ ಬಳಲುತ್ತಿದ್ದ ಪೂರ್ಣಜ್ಯೋತಿ ಅವರನ್ನು ಅವರ ಅಳಿಯ ಪೂವಣ್ಣ ಅವರು ಕಡಬ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಪ್ರಸ್ತುತ ಅವರು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಪೂರ್ಣಜ್ಯೋತಿ ಅವರು ನೀಡಿದ ದೂರಿನ ಆಧಾರದ ಮೇಲೆ ಕಡಬ ಪೊಲೀಸರು ಸೋನಿಕಾ ಪ್ರಸನ್ನ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್ 115(2) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುತ್ತೂರಿನ ಮಾನ್ಯ ನ್ಯಾಯಾಲಯದ ಆದೇಶದಂತೆ ಈ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related Articles

Latest Articles