ಇಂದು ( ಏ.17)ಬಲ್ಯದಲ್ಲಿ ಬೃಹತ್ ರಕ್ತದಾನ ಹಾಗೂ ಉಚಿತ ಕಣ್ಣಿನ ತಪಾಸಣಾ ಶಿಬಿರ

kadaba times

ಕಡಬ ತಾಲೂಕಿನ ಬಲ್ಯದಲ್ಲಿ ಏಪ್ರಿಲ್ 17ರಂದು ಶ್ರೀರಾಮ ಯುವಕ ಮಂಡಲದ ದಶಮಾನೋತ್ಸವ ಅಂಗವಾಗಿ ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣಿನ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ

kadaba times
uniq

ಕಡಬ: ಇಲ್ಲಿನ ಬಲ್ಯ ಶ್ರೀರಾಮ ಯುವಕ ಮಂಡಲ (ರಿ.) ಇದರ ದಶಮಾನೋತ್ಸವದ ಅಂಗವಾಗಿ, ವೆನ್ಲಾಕ್ ರಕ್ತನಿಧಿ ಘಟಕ ಮಂಗಳೂರು ಹಾಗೂ ಜಿಲ್ಲಾ ಸಂಚಾರಿ ನೇತ್ರ ಘಟಕ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣಿನ ತಪಾಸಣಾ ಶಿಬಿರವು ಆಯೋಜನೆಗೊಂಡಿದೆ.

ದಿನಾಂಕ 17-04-2026ನೇ ಶುಕ್ರವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಬಲ್ಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಶಿಬಿರ ನಡೆಯಲಿದೆ.

ಶಿಬಿರದ ವಿಶೇಷತೆಗಳು:

  • ಕಣ್ಣಿನ ತಪಾಸಣೆ ನಡೆಸಿ ಅಗತ್ಯವಿರುವವರಿಗೆ ಲಭ್ಯವಿರುವ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು.

    kadaba times
    kadaba times
  • ಕಣ್ಣಿನ ಪೊರೆ ಇರುವವರಿಗೆ ಶಸ್ತ್ರಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು.

  • ರಕ್ತದಾನದ ಮೂಲಕ ಜೀವ ಉಳಿಸುವ ಸತ್ಕಾರ್ಯಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ.

ಶಿಬಿರದಲ್ಲಿ ಭಾಗವಹಿಸುವವರು ತಮ್ಮ ಆಧಾರ್ ಕಾರ್ಡ್ ಹಾಗೂ ರೇಷನ್ ಕಾರ್ಡ್ ತರಬೇಕೆಂದು ಆಯೋಜಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 81054 10105. “ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿ ಜೀವ ಉಳಿಸಿ” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುವ ಈ ಸಾಮಾಜಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀರಾಮ ಯುವಕ ಮಂಡಲ ಬಲ್ಯ ಪ್ರಕಟಣೆಯಲ್ಲಿ ತಿಳಿಸಿದೆ

Related Articles

Latest Articles