Road Accident:ಡಿವೈಡರ್‌ ಗೆ ಡಿಕ್ಕಿಯಾದ ಬೈಕ್‌- ಸ್ಥಳದಲ್ಲೇ ಸವಾರ ಮೃತ್ಯು

ಡಿಕ್ಕಿಯ ರಭಸಕ್ಕೆ ಬೈಕ್ ಹಾರಿ ರಸ್ತೆಯ ಇನ್ನೊಂದು ಬದಿಗೆ ಬಿದ್ದಿತ್ತು

kadaba times

ಎರಡು ಬೈಕ್‌ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಧನರಾಜ್ ಎಂಬ ಯುವಕ ಮೃತಪಟ್ಟಿದ್ದಾರೆ. ಅಪಘಾತದ ಸಂಪೂರ್ಣ ವಿವರ ಇಲ್ಲಿದೆ.

kadaba times
uniq

ಪುತ್ತೂರಿನ  ಪಡೀಲ್ ಬಳಿ ಶನಿವಾರ (ಏಪ್ರಿಲ್ 18) ಮಧ್ಯಾಹ್ನ ಸಂಭವಿಸಿದ ಎರಡು ಬೈಕ್‌ಗಳ ನಡುವಿನ ಭೀಕರ ಅಪಘಾತದಲ್ಲಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೆಳ್ಳಿಪ್ಪಾಡಿ ಕೊಡಿರದ ವಿಶ್ವನಾಥ ಪೂಜಾರಿ ಅವರ ಪುತ್ರ ಧನರಾಜ್ (29 ವರ್ಷ) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.

ಧನರಾಜ್ ಅವರು ತಮ್ಮ ಬೈಕ್‌ನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಸಾಗುತ್ತಿದ್ದರು. ಈ ವೇಳೆ ಪಡೀಲ್ ಸಮೀಪ ತಲುಪುತ್ತಿದ್ದಂತೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಾರಿ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದೆ.

kadaba times
kadaba times

ಅದೇ ಸಮಯದಲ್ಲಿ ಉಪ್ಪಿನಂಗಡಿಯಿಂದ ಪುತ್ತೂರು ಕಡೆಗೆ ಇಬ್ಬರು ಪ್ರಯಾಣಿಸುತ್ತಿದ್ದ ಮತ್ತೊಂದು ಬೈಕ್ ಧನರಾಜ್ ಅವರ ಬೈಕ್‌ಗೆ ಡಿಕ್ಕಿಯಾಗಿದೆ. ಈ ಸರಣಿ ಅಪಘಾತದ ರಭಸಕ್ಕೆ ಧನರಾಜ್ ಅವರು ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ತಲೆ ಬಡಿದು ಬಿದ್ದಿದ್ದಾರೆ. ತಲೆಗೆ ತೀವ್ರತರವಾದ ಪೆಟ್ಟು ಬಿದ್ದ ಪರಿಣಾಮ ಅವರು ರಕ್ತದ ಮಡುವಿನಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೂ ಗಾಯಗಳಾಗಿದ್ದು, ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ತಕ್ಷಣ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Related Articles

Latest Articles