ಪೆರಿಯಶಾಂತಿ ಬಳಿ ಬೈಕ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿ ಮರದ ಬುಡದಲ್ಲಿ ಶವವಾಗಿ ಪತ್ತೆ

kadaba times

ಪೆರಿಯಶಾಂತಿ-ಇಚಿಲಂಪಾಡಿ ರಸ್ತೆಯ ಕಾಡಿನೊಳಗೆ ಬಿಜೀರು ನಿವಾಸಿ ಸಜೀವ್ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಪತ್ತೆಯಾಗಿದ್ದ ಅವರ ಮೃತದೇಹ ಭಾನುವಾರ ಪತ್ತೆಯಾಗಿದೆ.

kadaba times
uniq

ಪೆರಿಯಶಾಂತಿ ಮತ್ತು ಇಚಿಲಂಪಾಡಿ ರಸ್ತೆಯ ಮಧ್ಯೆ ಇರುವ ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್ 19ರ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಇಚಿಲಂಪಾಡಿ ಗ್ರಾಮದ ಬಿಜೀರು ನಿವಾಸಿ ಎಸ್. ಸಜೀವ (46) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಶನಿವಾರ ಬೆಳಿಗ್ಗೆ ತನ್ನ ಬೈಕ್‌ನಲ್ಲಿ ಮನೆಯಿಂದ ಹೊರಟಿದ್ದ ಸಜೀವ ಅವರು ಸಂಜೆಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಇದರಿಂದ ಆತಂಕಗೊಂಡ ಕುಟುಂಬಸ್ಥರು ಮತ್ತು ಸಂಬಂಧಿಕರು ವಿವಿಧ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಭಾನುವಾರ ಬೆಳಿಗ್ಗೆ ಪೆರಿಯಶಾಂತಿಯಿಂದ ಇಚಿಲಂಪಾಡಿಗೆ ಹೋಗುವ ರಸ್ತೆಯ ಬದಿಯಲ್ಲಿ ಸಜೀವ ಅವರ ಬೈಕ್ ಪತ್ತೆಯಾಗಿತ್ತು.

kadaba times
kadaba times

ಬೈಕ್ ಕಂಡು ಅನುಮಾನಗೊಂಡ ಕುಟುಂಬಸ್ಥರು ಸುತ್ತಮುತ್ತಲಿನ ಕಾಡಿನಲ್ಲಿ ಶೋಧ ನಡೆಸಿದಾಗ, ಮರದ ಬುಡವೊಂದರಲ್ಲಿ ಸಜೀವ ಅವರ ಮೃತದೇಹ ಪತ್ತೆಯಾಗಿದೆ.

ಮದ್ಯದ ಬಾಟಲಿಗಳು ಪತ್ತೆ: ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಕಂಡುಬಂದಿದ್ದು, ಸಜೀವ ಅವರು ಮೊದಲು ಮದ್ಯ ಸೇವಿಸಿ, ಬಳಿಕ ವಿಷ ಕುಡಿದು ಜೀವನ ಕೊನೆಗಾಣಿಸಿರಬಹುದು ಎಂದು ಮೇಲ್ನೋಟಕ್ಕೆ ಶಂಕಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಹಾಗೂ ಮುಂದಿನ ತನಿಖೆಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Latest Articles