ಚಹಾ ಕುಡಿಯುತ್ತಿದ್ದ ವಿದ್ಯಾರ್ಥಿ ಮೇಲೆ ಗ್ಯಾಂಗ್‌ನಿಂದ ಹಲ್ಲೆ:FIR ದಾಖಲು

kadaba times

ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ಬೆಳ್ತಂಗಡಿ ಮೂಲದ ಕಾಲೇಜು ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

kadaba times
uniq

ಪುತ್ತೂರು: ನಗರದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ಕಾಲೇಜು ವಿದ್ಯಾರ್ಥಿಯ ಮೇಲೆ ತಂಡವೊಂದು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಳೆಯ ಗಲಾಟೆಯೊಂದನ್ನು ಬಿಡಿಸಿದ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ ನಿವಾಸಿಯಾಗಿರುವ ಆದಿಲ್ ಹುಸೈನ್ (21) ಎಂಬವರು ಪುತ್ತೂರಿನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದಿನಾಂಕ 22-04-2026ರಂದು ಸಂಜೆ ಕಾಲೇಜು ಮುಗಿಸಿ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಅವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಬಸ್ ನಿಲ್ದಾಣದ ಸಮೀಪ ಚಹಾ ಕುಡಿಯುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳಾದ ಬಿ.ಕೆ. ಮೊಯಿನುದ್ದೀನ್, ಮೋಹದ್ ಹಾಗೂ ಇತರ ಐವರು ಸೇರಿ ಆದಿಲ್ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಆದಿಲ್ ಮೇಲೆ ಹಲ್ಲೆ ನಡೆಸುತ್ತಿದ್ದನ್ನು ಕಂಡ ಅವರ ಸ್ನೇಹಿತರು ಪ್ರಶ್ನಿಸಿದಾಗ, ಅವರಿಗೂ ಆರೋಪಿಗಳು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. ಗಲಾಟೆ ಕಂಡು ಸಾರ್ವಜನಿಕರು ಸ್ಥಳಕ್ಕೆ ಬಂದಾಗ, ಆರೋಪಿಗಳು ವಿದ್ಯಾರ್ಥಿಗೆ ಅವಾಚ್ಯವಾಗಿ ಬೈದು, ಜೀವಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಹಲ್ಲೆಯಿಂದ ಗಾಯಗೊಂಡ ಆದಿಲ್ ಸದ್ಯ ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

kadaba times
kadaba times
ಹಳೆಯ ವೈಷಮ್ಯವೇ ಕಾರಣ?

ಕೆಲವು ತಿಂಗಳ ಹಿಂದೆ ಕಾಲೇಜು ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ತಂಡ ಹೊಡೆಯುತ್ತಿದ್ದರು. ಆ ಸಂದರ್ಭದಲ್ಲಿ ಆದಿಲ್ ಅವರು ಮಧ್ಯಪ್ರವೇಶಿಸಿ ಗಲಾಟೆಯನ್ನು ಬಿಡಿಸಿದ್ದರು. ಇದೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ಈಗ ತನಗೆ ಹೊಡೆಯಲಾಗಿದೆ ಎಂದು ಆದಿಲ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

 ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 49/2026ರಂತೆ ಪ್ರಕರಣ ದಾಖಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ವಿವಿಧ ಕಲಂಗಳು ಸೇರಿದಂತೆ (189(2), 191(2), 191(3), 352, 115(2), 118(1), 351(2), 190) ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Related Articles

Latest Articles