28.5 C
Kadaba
Monday, March 17, 2025

ಹೊಸ ಸುದ್ದಿಗಳು

Champashashti Maharathotsava: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಚಂಪಾಷಷ್ಠಿ ಮಹಾರಥೋತ್ಸವ: ಭಕ್ತಿ, ಸಂಭ್ರಮಕ್ಕೆ ಸಾಕ್ಷಿಯಾದ ಕುಕ್ಕೆ ಸುಬ್ರಹ್ಮಣ್ಯದ ರಥಬೀದಿ

Must read

 

kadabatimes.in
ಮಹಾರಥೋತ್ಸವ ವೇಳೆ ನೆರೆದಿದ್ದ ಸಹಸ್ರಾರು ಭಕ್ತರು(KADABA TIMES)

kadabatimes.in

ಕುಕ್ಕೆ ಸುಬ್ರಹ್ಮಣ್ಯ: ಕಡಬ ತಾಲೂಕಿನ ಪ್ರಸಿದ್ದ  ಮಹಾತೋಭಾರ
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ  ಜಾತ್ರಾ
ಮಹೋತ್ಸವದ  ಪ್ರಧಾನ
ದಿನವಾದ ಕಾರ್ತಿಕ ಶುದ್ಧ ಷಷ್ಠಿಯ ಡಿ.7 ಶನಿವಾರ ಬೆಳಗ್ಗೆ
ಚಂಪಾಷಷ್ಠಿ ಮಹಾರಥೋತ್ಸವ ನೆರೆದಿದ್ದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಜರುಗಿತು.


ಪ್ರಾತಃಕಾಲ 6.57 ವೃಶ್ಚಿಕ ಲಗ್ನ
ಸುಮುಹೂರ್ತದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣರಾದರು. ಸುವರ್ಣ ವೃಷ್ಠಿಯಾಗಿ, ಚಿಕ್ಕ ರಥೋತ್ಸವ ಜರುಗಿತು. ಬಳಿಕ  ಚಂಪಾಷಷ್ಠಿ
ಮಹಾರಥೋತ್ಸವ ಜರುಗಿತು. ಬಳಿಕ ಷಷ್ಠಿ ಕಟ್ಟೆಯಲ್ಲಿ ಮತ್ತು ಒಳಾಂಗಣದ ಕಟ್ಟೆಯಲ್ಲಿ ಅವಳಿ ದೇವರಿಗೆ ಪೂಜೆ ನೆರವೇರಿತು.

kadabatimes.in

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ  ಜಾತ್ರಾ ಮಹೋತ್ಸವ


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್., ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಜುಬಿನ್ ಮೊಹಪಾತ್ರ, ಶಾಸಕಿ  ಭಾಗೀರಥಿ
ಮುರುಳ್ಯ, ಮಾಜಿ ಸಚಿವ ಬಿ.ರಮಾನಾಥ ರೈ,
ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ಹಕ ಅಧಿಕಾರಿ ಯೇಸುರಾಜ್ ಸೇರಿದಂತೆ ಕ್ಷೇತ್ರದ ಭಕ್ತರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

kadabatimes.in