ಸುಬ್ರಹ್ಮಣ್ಯ: ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ ಹೃದಯಾಘಾತಕ್ಕೆ ಬಲಿ

kadaba times

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕ, ಕಾಣಿಯೂರು ನಿವಾಸಿ ಮಾಧವ ಗೌಡ (50) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ

kadaba times
uniq

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ, ಕಾಣಿಯೂರು ಕಟ್ಟತ್ತಾರು ನಿವಾಸಿ ಮಾಧವ ಗೌಡ (50) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಒಂದು ವರ್ಷದ ಹಿಂದೆಯಷ್ಟೇ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದ ಇವರು, ಕರ್ತವ್ಯದ ಅವಧಿಯಲ್ಲಿ ಜನಾನುರಾಗಿಯಾಗಿದ್ದರು. ಇಂದು ಅವರಿಗೆ ದಿಢೀರ್ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

kadaba times
kadaba times

ಪ್ರಸ್ತುತ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ.

Related Articles

Latest Articles