
ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದ ಕೊಠರಿ ನಿವಾಸಿ ಸಂಜೀವ ನಾೖಕ್ ಅವರ ಪತ್ನಿ ದೇವಕಿ ನಾೖಕ್(72 ವ) ಅವರು ಇಂದು (ಶನಿವಾರ) ನಿಧನರಾಗಿದ್ದಾರೆ.


ಮೃತರು ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದು ಗುಣಮುಖರಾಗಿದ್ದ ಅವರು, ಇಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಪುತ್ರರಾದ ರಮೇಶ್ ಹಾಗೂ ವಿಘ್ನೇಶ್, ಓರ್ವ ಪುತ್ರಿ, ಸೊಸೆಯಂದಿರು, ಅಳಿಯ ಹಾಗೂ ಮೊಮ್ಮಕ್ಕಳು ಮತ್ತು ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.


ಅಂತ್ಯಕ್ರಿಯೆಯು ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಮೃತರ ಸ್ವಗೃಹದ ಆವರಣದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
