ಕಡಬ: ನಿಯಂತ್ರಣ ತಪ್ಪಿ ಪಾದಾಚಾರಿಗೆ ಡಿಕ್ಕಿ ಹೊಡೆದ ಕಾರು

kadaba times

ಕಡಬ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಯೊಬ್ಬರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದು, ಅವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಬೆ ಗ್ರಾಮದ ಕೋಚಕಟ್ಟೆ ಎಂಬಲ್ಲಿ ನಡೆದಿದೆ.

kadaba times
uniq

ಅಲಂಕಾರು ಗ್ರಾಮದ ನಿವಾಸಿ ಸೀತಾರಾಮ (42) ಅಪಘಾತದಲ್ಲಿ ಗಾಯಗೊಂಡ ದುರ್ದೈವಿ. ಮೇ 12ರಂದು ಸಂಜೆ ವೇಳೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸೀತಾರಾಮ ಅವರು ಮೇ 12ರಂದು ಸಂಜೆ ಪೆರಾಬೆ ಗ್ರಾಮದ ಕೋಚಕಟ್ಟೆ ಎಂಬಲ್ಲಿ ತಮ್ಮ ಮನೆಗೆ ತೆರಳಲು ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಎಡಬದಿಯ ಮಣ್ಣು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬಂದಕಾರಿನ ಚಾಲಕ, ವಾಹನವನ್ನು ಅತಿ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸೀತಾರಾಮ ಅವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ಸೀತಾರಾಮ ಅವರು ರಸ್ತೆಯ ಎಡಬದಿಗೆ ಎಸೆಯಲ್ಪಟ್ಟು, ದೇಹದ ವಿವಿಧ ಭಾಗಗಳಿಗೆ ಬಲವಾದ ಗಾಯಗಳಾಗಿವೆ.

kadaba times
kadaba times

ಮಾನವೀಯತೆ ಮೆರೆದ ಸಾರ್ವಜನಿಕರು: ಅಪಘಾತ ಸಂಭವಿಸಿದ ತಕ್ಷಣ ಕಾರಿನ ಚಾಲಕ ಹಾಗೂ ಸ್ಥಳದಲ್ಲಿದ್ದ ಇತರ ಸಾರ್ವಜನಿಕರು ಗಾಯಾಳುವನ್ನು ಉಪಚರಿಸಿ, ತಕ್ಷಣವೇ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ.

ಅಪಘಾತದ ಕುರಿತು ಗಾಯಾಳು ಸೀತಾರಾಮ ಅವರು ನೀಡಿದ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕನ ವಿರುದ್ಧ ಅಪರಾಧ ಕ್ರಮಾಂಕ 60/2026, ಹಾಗೂ ಭಾರತೀಯ ನ್ಯಾಯ ಸಂಹಿತೆ (BNS-2023) ಕಲಂ: 281 (ಸಾರ್ವಜನಿಕ ರಸ್ತೆಯಲ್ಲಿ ಅಜಾಗರೂಕತೆಯ ಚಾಲನೆ) ಮತ್ತು 125(a) (ಇತರರ ಜೀವಕ್ಕೆ ಅಪಾಯ ತರುವ ನಡೆ) ರಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Latest Articles