ಕಡಬದ ಹೊಸಮಠ ಸರ್ಕಾರಿ ಶಾಲೆ ಬಂದ್; 5 ವಿದ್ಯಾರ್ಥಿಗಳು ಹತ್ತಿರದ ಶಾಲೆಗೆ ಶಿಪ್ಟ್

kadaba times

ಕಡಬ/ಪುತ್ತೂರು: ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಶಿಕ್ಷಣ ಇಲಾಖೆಯು ವಿವಿಧ ಯೋಜನೆಗಳನ್ನು ರೂಪಿಸುತ್ತಿದ್ದರೂ, ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವುದು ಆತಂಕ ತಂದೊಡ್ಡಿದೆ. ಮಕ್ಕಳ ಕೊರತೆಯ ಕಾರಣದಿಂದಾಗಿಯೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಹಾಗೂ ಪುತ್ತೂರು ತಾಲೂಕಿನ ಎರಡು ಪ್ರಮುಖ ಸರ್ಕಾರಿ ಶಾಲೆಗಳು ಈ ಶೈಕ್ಷಣಿಕ ವರ್ಷದಿಂದ ಅಧಿಕೃತವಾಗಿ ಬಾಗಿಲು ಮುಚ್ಚಿವೆ.

kadaba times
uniq
ಕಡಬದ ಹೊಸಮಠ ಶಾಲೆ ಬಂದ್; ಕೇವಲ 5 ವಿದ್ಯಾರ್ಥಿಗಳು

ಶಿಕ್ಷಣ ಇಲಾಖೆಯ ಅಧಿಕೃತ ಮೂಲಗಳ ಪ್ರಕಾರ, ಕಡಬ ತಾಲೂಕಿನ ಹೊಸಮಠ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಈ ಸಾಲಿನಿಂದ ಮುಚ್ಚಲಾಗಿದೆ. ಕಳೆದ ಕೆಲವು ವರ್ಷಗಳಿಂದ ಈ ಶಾಲೆಯಲ್ಲಿ ಪ್ರವೇಶ ಪಡೆಯುವ ಮಕ್ಕಳ ಸಂಖ್ಯೆ ತೀವ್ರವಾಗಿ ಇಳಿಕೆಯಾಗುತ್ತಿತ್ತು. ಪ್ರಸಕ್ತ ವರ್ಷ ಶಾಲೆಯಲ್ಲಿ ಕೇವಲ 5 ವಿದ್ಯಾರ್ಥಿಗಳು ಮಾತ್ರ ಇದ್ದಿದ್ದರಿಂದ, ನಿಗದಿತ ಸಂಖ್ಯೆಗಿಂತ ಕಡಿಮೆ ಮಕ್ಕಳಿರುವ ಹಿನ್ನೆಲೆಯಲ್ಲಿ ಇಲಾಖೆಯ ನಿಯಮದಂತೆ ಶಾಲೆಯನ್ನು ಮುಚ್ಚುವ ಅನಿವಾರ್ಯತೆ ಎದುರಾಗಿದೆ. ಇಲ್ಲಿ ಓದುತ್ತಿದ್ದ 5 ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ಅಡ್ಡಿಯಾಗದಂತೆ ಹತ್ತಿರದ ಶಾಲೆಗಳಿಗೆ ದಾಖಲಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿದ್ದಾರೆ. ಹಾಗೆಯೇ ಶಾಲೆಯಲ್ಲಿದ್ದ ಶಿಕ್ಷಕರನ್ನು ಅವಶ್ಯಕತೆಯಿರುವ ಇತರೆ ಶಾಲೆಗಳಿಗೆ ಮರುಹೊಂದಾಣಿಕೆ ಮಾಡಲಾಗಿದೆ.

ಪುತ್ತೂರಿನ ಪೆರ್ನಾಜೆ ಶಾಲೆಯೂ ಬಂದ್; ಕುಂಟಿಕಾನಕ್ಕೆ ಮಕ್ಕಳ ಶಿಫ್ಟ್:

ಇತ್ತ ಪುತ್ತೂರು ತಾಲೂಕಿನ ಪೆರ್ನಾಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯೂ ಕೂಡ ವಿದ್ಯಾರ್ಥಿಗಳ ಕೊರತೆಯಿಂದಾಗಿ ಮುಚ್ಚಲ್ಪಟ್ಟಿದೆ. ಪೆರ್ನಾಜೆ ಶಾಲೆಯಲ್ಲಿ ಈ ವರ್ಷ ಕೇವಲ 9 ವಿದ್ಯಾರ್ಥಿಗಳು ಮಾತ್ರ ಇದ್ದರು. ಹೀಗಾಗಿ ಈ ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಹತ್ತಿರದ ಕುಂಟಿಕಾನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಿಸಿ, ಪ್ರವೇಶ ಕಲ್ಪಿಸಲಾಗಿದೆ.

kadaba times
kadaba times
ದಾಖಲಾತಿ ಇಳಿಕೆಗೆ ವಯೋಮಿತಿ ನಿಯಮವೇ ಕಾರಣವೇ?:

ಗ್ರಾಮೀಣ ಭಾಗದಲ್ಲಿಯೂ ಆಂಗ್ಲ ಮಾಧ್ಯಮ ಶಾಲೆಗಳ ವ್ಯಾಮೋಹ ಹೆಚ್ಚುತ್ತಿರುವುದು ಸರ್ಕಾರಿ ಶಾಲೆಗಳ ಅಸ್ತಿತ್ವಕ್ಕೆ ದೊಡ್ಡ ಸವಾಲಾಗಿದೆ. ಇದರ ಜೊತೆಗೆ, ಸರ್ಕಾರವು ಒಂದನೇ ತರಗತಿಯ ಪ್ರವೇಶಕ್ಕೆ ಮಕ್ಕಳ ದಾಖಲಾತಿ ವಯೋಮಿತಿಯನ್ನು 5 ವರ್ಷ 10 ತಿಂಗಳು ಕಡ್ಡಾಯ ಮಾಡಿರುವುದು ಒಂದನೇ ತರಗತಿಯ ದಾಖಲಾತಿ ಕುಸಿತಕ್ಕೆ ಮುಖ್ಯ ಕಾರಣವಾಗಿದೆ ಎಂದು ವಿಶ್ಲೇಷಿಸಲಾಗಿದೆ.

ದಾಖಲಾತಿ ವಯೋಮಿತಿಯಲ್ಲಿ ಕನಿಷ್ಠ 2 ತಿಂಗಳ ಸಡಿಲಿಕೆಯನ್ನು ಕೊಡಬೇಕು ಎಂದು ಈಗಾಗಲೇ ಪೋಷಕರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಆದೇಶ ಬಂದಿಲ್ಲ. 5 ವರ್ಷ 5 ತಿಂಗಳಿನಿಂದ 6 ವರ್ಷದವರೆಗಿನ ಎಲ್ಲಾ ಮಕ್ಕಳಿಗೂ ಒಂದನೇ ತರಗತಿಗೆ ದಾಖಲಾತಿ ಪಡೆಯಲು ಮುಕ್ತ ಅವಕಾಶ ನೀಡಬೇಕು ಎಂದು ಪೋಷಕರು ಒತ್ತಾಯಿಸಿದ್ದು, ಈ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಸಂಸದರು ಸರ್ಕಾರದ ಗಮನ ಸೆಳೆಯಬೇಕಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Related Articles

Latest Articles