ಪೆರಿಯಶಾಂತಿಯಲ್ಲಿ ಎರಡು ಬೈಕ್‌ಗಳ ನಡುವೆ ಅಪಘಾತ; ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

kadaba times

ನೆಲ್ಯಾಡಿ: ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಬುಧವಾರ ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

kadaba times
uniq

ಮೃತಪಟ್ಟ ದುರ್ದೈವಿಯನ್ನು ಕಾಸರಗೋಡು ಜಿಲ್ಲೆಯ ಏರಿಕ್ಕುಲಮ್ ನಿವಾಸಿ ರಿಜೇಶ್.ವಿ (33) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತಲೆ ಮತ್ತು ದೇಹಕ್ಕೆ ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬೈಕ್ ಸವಾರನನ್ನು ಕೊಕ್ಕಡ ಗ್ರಾಮದ ಹಳಿಂಗೇರಿ ನಿವಾಸಿ ಹಾಗೂ ಸಂಗಮ್ ಪಿಕಪ್ ವಾಹನದ ಚಾಲಕ ಗಿರೀಶ್ ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ್ದು ಹೇಗೆ?:

ಲಭ್ಯವಿರುವ ಮಾಹಿತಿಯ ಪ್ರಕಾರ, ಗಿರೀಶ್ ಅವರು ಗುಂಡ್ಯ ಕಡೆಯಿಂದ ಕೊಕ್ಕಡ ಕಡೆಗೆ ತಮ್ಮ ಬೈಕ್‌ನಲ್ಲಿ ಬರುತ್ತಿದ್ದರು. ಪೆರಿಯಶಾಂತಿ ತಲುಪಿದಾಗ ಅವರು ಕೊಕ್ಕಡ ರಸ್ತೆಯ ಕಡೆಗೆ ತಮ್ಮ ಬೈಕನ್ನು ತಿರುಗಿಸಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗವಾಗಿ ಬರುತ್ತಿದ್ದ ಮತ್ತೊಂದು ಬೈಕ್ ಗಿರೀಶ್ ಅವರ ಬೈಕ್‌ಗೆ ಹಿಂಬದಿಯಿಂದ ಪ್ರಚಂಡ ವೇಗದಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ರಿಜೇಶ್ ಅವರು ರಸ್ತೆಗೆ ಎಸೆಯಲ್ಪಟ್ಟು, ತಲೆಗೆ ಬಲವಾದ ಪೆಟ್ಟು ಬಿದ್ದ ಪರಿಣಾಮ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

kadaba times
kadaba times
ಸ್ಥಳೀಯರಿಂದ ರಕ್ಷಣೆ – ತನಿಖೆ ಮುಂದುವರಿಕೆ:

ಅಪಘಾತದ ಸದ್ದು ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಸಾರ್ವಜನಿಕರು ತೀವ್ರವಾಗಿ ಗಾಯಗೊಂಡಿದ್ದ ಗಿರೀಶ್ ಅವರನ್ನು ರಕ್ಷಿಸಿದ್ದಾರೆ. ಅವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

ಇತ್ತ ಮೃತ ರಿಜೇಶ್ ಅವರ ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆದ್ದಾರಿಯಲ್ಲಿದ್ದ ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ. ಈ ಕುರಿತು ನೆಲ್ಯಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Latest Articles