ನೆಲ್ಯಾಡಿಯ ಹಿರಿಯ ಸಿವಿಲ್ ಇಂಜಿನಿಯರ್ ಹೃದಯಾಘಾತದಿಂದ ನಿಧನ

kadaba times

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ, ಹಿರಿಯ ಹಾಗೂ ಪ್ರಸಿದ್ಧ ಸಿವಿಲ್ ಇಂಜಿನಿಯರ್ ಆಗಿದ್ದ ಮ್ಯಾಥ್ಯೂ ವಿ.ಎ (66) ಅವರು ಗುರುವಾರ ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಸಂಭವಿಸಿದ  ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

kadaba times
uniq
ಪ್ರಾಮಾಣಿಕ ಸೇವೆಗೆ ಹೆಸರಾಗಿದ್ದ ಮ್ಯಾಥ್ಯೂ:

ಮೃತ ಮ್ಯಾಥ್ಯೂ ವಿ.ಎ. ಅವರು ಪುತ್ತೂರಿನ ಪ್ರತಿಷ್ಠಿತ ‘ಮಾಸ್ಟರ್ ಪ್ಲಾನ್’ ಸಂಸ್ಥೆಯಲ್ಲಿ ಹಲವು ವರ್ಷಗಳ ಕಾಲ ಸಿವಿಲ್ ಇಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಹಾಗೂ ದಕ್ಷ ಸೇವೆಯ ಮೂಲಕ ಗ್ರಾಹಕರು ಮತ್ತು ಸಾರ್ವಜನಿಕ ವಲಯದಲ್ಲಿ ಜನಪ್ರಿಯತೆ ಗಳಿಸಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದ ಅವರು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ನೆಲ್ಯಾಡಿಯ ಪ್ರಸಿದ್ಧ ಸಂತ ಜಾರ್ಜ್ ವಿದ್ಯಾಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಅಬ್ರಹಾಂ ವರ್ಗೀಸ್ ಸೇರಿದಂತೆ ಮೂವರು ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಒ ಅಗಲಿದ್ದಾರೆ.

kadaba times
kadaba times

ಮ್ಯಾಥ್ಯೂ ವಿ.ಎ. ಅವರ ಹಠಾತ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ  ಕುಟುಂಬಸ್ಥರು,  ಇಂಜಿನಿಯರಿಂಗ್ ಕ್ಷೇತ್ರದ ಸಹೋದ್ಯೋಗಿಗಳು ಹಾಗೂ ಪ್ರಮುಖ ಗಣ್ಯರು ಆಲಂಪಾಡಿಯ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು, ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

Related Articles

Latest Articles