
ಸುಬ್ರಹ್ಮಣ್ಯ: ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಹಾಗೂ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ (ರಿ.) ಇವುಗಳ ಜಂಟಿ ಆಶ್ರಯದಲ್ಲಿ ಜುಲೈ 9ರ ಗುರುವಾರದಂದು ಸುಬ್ರಹ್ಮಣ್ಯದಲ್ಲಿ ‘ಪತ್ರಿಕಾ ದಿನಾಚರಣೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.


ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಾಳೆ ಪೂರ್ವಾಹ್ನ 10:00 ಗಂಟೆಗೆ ಈ ಸಮಾರಂಭವು ಜರುಗಲಿದೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಅವರು ಉದ್ಘಾಟಿಸಲಿದ್ದಾರೆ. ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್. ಬಾಲಕೃಷ್ಣ ಕೊಯಿಲ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಉಪಸ್ಥಿತರಿದ್ದು ಸಾಧಕರನ್ನು ಸನ್ಮಾನಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರಿನ ದಾಯಿ ವರ್ಲ್ಡ್ (Daijiworld) ಮುಖ್ಯಸ್ಥ ವಾಲ್ಟರ್ ನಂದಳಿಕೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಬೆಂಗಳೂರು) ಕಾರ್ಯಕಾರಿಣಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರುಗಳು ಭಾಗವಹಿಸಲಿದ್ದಾರೆ. ಶ್ರೀ ಸುಬ್ರಹ್ಮಣೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ನಾಯಕ್ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ.
ಸಾಧಕರಿಗೆ ಗೌರವ ಸನ್ಮಾನ:
ಇದೇ ಸಂದರ್ಭದಲ್ಲಿ ಪತ್ರಿಕೋದ್ಯಮ ವಲಯದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪಿ.ಬಿ. ಹರೀಶ್ ರೈ (ಅಧ್ಯಕ್ಷರು, ಪ್ರೆಸ್ ಕ್ಲಬ್ ಮಂಗಳೂರು) – ಪತ್ರಿಕೋದ್ಯಮದ ಸಾಧನೆಗಾಗಿ್ ಮತ್ತು ಬಸವರಾಜ್ (ಹಿರಿಯ ಪತ್ರಿಕಾ ವಿತರಕರು, ಸುಬ್ರಹ್ಮಣ್ಯ) – ಸುದೀರ್ಘ ಪತ್ರಿಕಾ ವಿತರಣಾ ಸೇವೆಗಾಗಿ ಇಬ್ಬರು ಪ್ರಮುಖ ಸಾಧಕರನ್ನು ಗುರುತಿಸಿ ಸನ್ಮಾನ ಮಾಡಲಾಗುತ್ತಿದೆ.


ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ:
ಪತ್ರಿಕಾ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಯುವಜನತೆಗಾಗಿ ‘ವಿದ್ಯಾರ್ಥಿಗಳ ಭವಿಷ್ಯಕ್ಕೆ ಪತ್ರಿಕೋದ್ಯಮದ ಅಧ್ಯಯನ’ ಎಂಬ ವಿಶೇಷ ವಿಷಯದ ಕುರಿತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಪ್ರಖ್ಯಾತ ಮಾಧ್ಯಮ ನಿರೂಪಕ ಹಾಗೂ ದಾಯಿ ವರ್ಲ್ಡ್ ಮುಖ್ಯಸ್ಥ ವಾಲ್ಟರ್ ನಂದಳಿಕೆ ಅವರು ಈ ವಿಶಿಷ್ಟ ಮಾತುಕತೆಯನ್ನು ನಡೆಸಿಕೊಡಲಿದ್ದಾರೆ.
ಕಡಬ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಚೆನ್ನಾವರ ಹಾಗೂ ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಅಧ್ಯಕ್ಷ ರತ್ನಾಕರ ಸುಬ್ರಹ್ಮಣ್ಯ ಮತ್ತು ಪ್ರಧಾನ ಕಾರ್ಯದರ್ಶಿ ಶಿವರಾಮ್ ಕಜೆಮೂಲೆ ಸೇರಿದಂತೆ ಸಂಘಟನೆಯ ಸರ್ವ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಕಾರ್ಯಕ್ರಮಕ್ಕೆ ತಾಲೂಕಿನ ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಪ್ರೀತಿಪೂರ್ವಕವಾಗಿ ಆಮಂತ್ರಿಸಿದ್ದಾರೆ.
