ರಜೆಯ ಮೇಲೆ ಊರಿಗೆ ಬಂದಿದ್ದ ಕಡಬದ ಯೋಧ ರಸ್ತೆ ಅಪಘಾತಕ್ಕೆ ಬಲಿ

kadaba times

ಮಂಗಳೂರು/ಕಡಬ: ಜಮ್ಮುವಿನಲ್ಲಿ ದೇಶದ ಭದ್ರತಾ ಸೇವೆಯಲ್ಲಿದ್ದ ಕರಾವಳಿಯ  ಯೋಧನೊಬ್ಬ ರಜೆಯ ಮೇಲೆ ಊರಿಗೆ ಬಂದಿದ್ದ ಸಂದರ್ಭದಲ್ಲೇ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಕರುಣಾಜನಕ ಘಟನೆ ಮಂಗಳೂರು ನಗರದಲ್ಲಿ ಸಂಭವಿಸಿದೆ.

kadaba times
uniq

ಕಡಬ ತಾಲೂಕಿನ ಕೊಯಿಲ ಗ್ರಾಮದ ಪುತ್ಯೆ ನಿವಾಸಿಯಾದ, ಸಿಐಎಸ್ಎಫ್ (CISF) ಜವಾನ್ ಸೀತಾರಾಮ ಗೌಡ ಅವರು ಮಂಗಳೂರಿನ ಕೆಪಿಟಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ.

ಈ  ಅಪಘಾತದ ಕುರಿತು ಮೃತರ ಪತ್ನಿ ರೋಹಿಣಿ ಅವರು ನೀಡಿದ ಲಿಖಿತ ದೂರಿನ ಅನ್ವಯ ಮಂಗಳೂರು ನಗರದ ಟ್ರಾಫಿಕ್ ಈಸ್ಟ್ (ಕದ್ರಿ) ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ: 91/2026 ರಂತೆ ಬಿಎನ್‌ಎಸ್ ಸೆಕ್ಷನ್ 281, 106(1) ಹಾಗೂ ಐಎಂವಿ ಆಕ್ಟ್ 184, 134 (a)&(b), 187 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಜಮ್ಮುವಿನಿಂದ ರಜೆಗೆ ಬಂದಿದ್ದ ಯೋಧ:

CISF ನಲ್ಲಿ ಸೇವೆ ಸಲ್ಲಿಸುತ್ತಿರುವ ಸೀತಾರಾಮ ಗೌಡರವರು ಪ್ರಸ್ತುತ ಜಮ್ಮುವಿನ ಸೆಂಟ್ರಲ್ ಜೈಲ್‌ನಲ್ಲಿ ಕರ್ತವ್ಯ ನಿರತರಾಗಿದ್ದರು. ಇತ್ತೀಚೆಗಷ್ಟೇ ಅಂದರೆ ಜುಲೈ 3ರಂದು ಅವರು ರಜೆಯ ನಿಮಿತ್ತ ಊರಿಗೆ ಬಂದಿದ್ದರು. ಜುಲೈ 7ರಂದು ಕೆಲವು ಅಧಿಕೃತ ಎಸ್.ಐ.ಆರ್ (S.I.R) ದಾಖಲಾತಿಗಳನ್ನು ನೀಡುವ ಸಲುವಾಗಿ ಅವರು ಕಡಬ ತಾಲೂಕಿನ ಕೊಯಿಲದ ಊರು ಮನೆಗೆ ಹೋಗಿದ್ದರು.

ಜುಲೈ 8ರ ಬುಧವಾರದಂದು ಸೀತಾರಾಮ ಗೌಡರವರು ತಮ್ಮ  ಮೋಟಾರು ಸೈಕಲ್ (ಬೈಕ್) ಚಲಾಯಿಸಿಕೊಂಡು ಕೊಯಿಲದ ಮನೆಯಿಂದ ಹೊರಟು ಮಂಗಳೂರಿಗೆ ಬಂದಿದ್ದರು. ಸಂಜೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66 ರ ಕೆಪಿಟಿ (KPT) ಬಳಿಯ ‘ರೇಡಿಯಂಟ್ ಸ್ಟಾರ್ ಹೋಟೆಲ್’ (Radiant Star Hotel) ಸಮೀಪ ತಲುಪಿದಾಗ ಭೀಕರ ಅಪಘಾತ ಸಂಭವಿಸಿದೆ.

kadaba times
kadaba times

ಅಪಘಾತದ ತೀವ್ರತೆಗೆ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗೊಂಡಿದ್ದ ಸೀತಾರಾಮ ಗೌಡರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಎ.ಜೆ. ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. .

ಸ್ವಯಂ ಸ್ಕಿಡ್ಡೋ ಅಥವಾ ಹಿಟ್ ಅಂಡ್ ರನ್?: 

 ಸೀತಾರಾಮ ಗೌಡರ ಬೈಕ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ತಪ್ಪಿ ಸ್ವಯಂ ಸ್ಕಿಡ್ ಆಗಿ ಬಿದ್ದಿದೆಯೇ? ಅಥವಾ ಯಾವುದಾದರೂ ಅಪರಿಚಿತ ವಾಹನ ಇವರಿಗೆ ಭೀಕರವಾಗಿ ಢಿಕ್ಕಿ ಹೊಡೆದು (Hit and Run) ಪರಾರಿಯಾಗಿದೆಯೇ? ಎಂಬ ಬಗ್ಗೆ ಸೂಕ್ತ ಹಾಗೂ ವೈಜ್ಞಾನಿಕ ತನಿಖೆ ನಡೆಸಬೇಕು ಎಂದು ಮೃತರ ಪತ್ನಿ ರೋಹಿಣಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿನಂತಿಸಿದ್ದಾರೆ.

 ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹದ ಮಹಜರು ಪ್ರಕ್ರಿಯೆ ನಡೆಸಿ ತನಿಖೆ ಮುಂದುವರಿಸಿದ್ದಾರೆ. ಹೆದ್ದಾರಿಯ ಆಸುಪಾಸಿನ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ. ರಜೆಯ ಮೇಲೆ ಬಂದು ದುರಂತ ಅಂತ್ಯ ಕಂಡ ಸಿಐಎಸ್ಎಫ್ ಜವಾನನ ನಿಧನಕ್ಕೆ ಕಡಬ ಹಾಗೂ ಕೊಯಿಲ ಗ್ರಾಮಸ್ಥರು ತೀವ್ರ ಕಂಬನಿ ಮಿಡಿದಿದ್ದಾರೆ.

KADABA TIMES NEWS
KADABA TIMES NEWShttps://kadabatimes.in
ಕಡಬ ಟೈಮ್ಸ್ ಒಂದು ಸ್ವತಂತ್ರ ಮಾಧ್ಯಮವಾಗಿದ್ದು ಕಡಬ ತಾಲೂಕು ಕೇಂದ್ರಿತ ಸುದ್ದಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುತ್ತಿದೆ. ಇದರ ಜೊತೆಗೆ ದ.ಕ ಜಿಲ್ಲೆಯ ಪ್ರಮುಖ ಸುದ್ದಿಗಳು, ರಾಜ್ಯ,ದೇಶದ ಮಹತ್ವದ ಘಟನಾವಳಿಗಳನ್ನು ಸ್ಥಳೀಯರಿಗೆ ತಲುಪಿಸುತ್ತದೆ. ನಮ್ಮನ್ನು ಬೆಂಬಲಿಸಿ ಮತ್ತು ಪ್ರೋತ್ಸಾಹಿಸಿ. ನಿಮ್ಮೂರಿನ ಸುದ್ದಿ ಮಾಹಿತಿಗಳನ್ನು +91 93804 74819 ಗೆ ವಾಟ್ಸಪ್ ಮಾಡಿ.

Related Articles

Latest Articles