Car Accident-ಮಂತ್ರಾಲಯ ಬಳಿ ರಸ್ತೆ ಅಪಘಾತ: ಯಕ್ಷಧ್ರುವ ಪಟ್ಲ ಫೌಂಡೇಷನ್ ನಲ್ಲಿ ಗುರುಸಿಕೊಂಡಿದ್ದ ರವಿ ಶೆಟ್ಟಿ ದುರ್ಮರಣ

kadaba times

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿಯೂ, ಸಾಮಾಜಿಕ ಕಾರ್ಯಕರ್ತರೂ ಆಗಿದ್ದ ರವಿ ಶೆಟ್ಟಿ ಅಶೋಕ್ ನಗರ  ಅವರು ರಸ್ತೆ ಅಪಘಾತದಲ್ಲಿ ಮಂಗಳವಾರ (ಜುಲೈ 21) ಮುಂಜಾನೆ ನಿಧನರಾಗಿದ್ದಾರೆ.

kadaba times
uniq

ರವಿ ಶೆಟ್ಟಿ ಅವರು ಸ್ನೇಹಿತರೊಂದಿಗೆ ತಿರುಪತಿ ಯಾತ್ರೆ ಮುಗಿಸಿಕೊಂಡು ಸೋಮವಾರ ಮಂತ್ರಾಲಯದತ್ತ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮಂಗಳವಾರ ಮುಂಜಾನೆ ಮಂತ್ರಾಲಯ ತಲುಪಲು ಕೇವಲ 1 ರಿಂದ 2 ಕಿಲೋಮೀಟರ್ ಅಂತರವಿದ್ದಾಗ, ರವಿ ಶೆಟ್ಟಿಯವರು ಚಲಾಯಿಸುತ್ತಿದ್ದ ಕಾರು ಹಠಾತ್ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ರವಿ ಶೆಟ್ಟಿ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಅದೇ ಕಾರಿನಲ್ಲಿ ಪಯಣಿಸುತ್ತಿದ್ದ ಪುರುಷೋತ್ತಮ ಭಂಡಾರಿ, ಸುದೇಶ್ ರೈ ಹಾಗೂ ಪ್ರದೀಪ್ ಅಳ್ವ ಅವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಗಾಯಗೊಂಡಿರುವ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

kadaba times
kadaba times

ಮೃತ ರವಿ ಶೆಟ್ಟಿ ಅಶೋಕ್ ನಗರ ಅವರು ಮಂಗಳೂರು ಹಾಪ್‌ಕಾಮ್ಸ್ (HOPCOMS) ಉದ್ಯೋಗಿಯಾಗಿದ್ದರು. ಯಕ್ಷಧ್ರುವ ಪಟ್ಲ ಫೌಂಡೇಶನ್‌ನಲ್ಲಿ ಜೊತೆ ಕಾರ್ಯದರ್ಶಿಯಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಮಂಗಳೂರಿನ ಹಲವಾರು ಸಾಂಸ್ಕೃತಿಕ, ಸಾಮಾಜಿಕ ಹಾಗೂ ಧಾರ್ಮಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related Articles

Latest Articles