ಕಾಣೆಯಾಗಿದ್ದ ಅಪ್ರಾಪ್ತ ಬಾಲಕಿ ಪತ್ತೆ: ಕಡಬದ ಯುವಕ ಪೋಕ್ಸೊ ಪ್ರಕರಣದಲ್ಲಿ ಬಂಧನ

kadaba times

 ಅಪ್ರಾಪ್ತ ಬಾಲಕಿ ಪ್ರಕರಣದಲ್ಲಿ ಮೇ 7ರಂದು ಕಾಣೆಯಾಗಿದ್ದ ಬಾಲಕಿಯನ್ನು ಪೊಲೀಸರು ಜುಲೈ 22ರಂದು ಪತ್ತೆಹಚ್ಚಿದ್ದಾರೆ. ಬಾಲಕಿಯ ದೂರಿನ ಮೇರೆಗೆ ಕಡಬದ 18 ವರ್ಷದ ಯುವಕನ ವಿರುದ್ಧ BNS ಹಾಗೂ POCSO ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

kadaba times
uniq

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿದ್ದು, ಆಕೆಯ ದೂರಿನ ಮೇರೆಗೆ ಕಡಬದ  ಯುವಕನನ್ನು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮೇ 7ರಂದು ಅಪ್ರಾಪ್ತ ಬಾಲಕಿ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿರುವುದಾಗಿ ಹೇಳಿ ಮನೆಯಿಂದ ಹೊರಟಿದ್ದಳು. ಬಳಿಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಮೇ 11ರಂದು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ತನಿಖೆಯನ್ನು ಮುಂದುವರಿಸಿದ ಸುಳ್ಯ  ಪೊಲೀಸರು ಜುಲೈ 22ರಂದು ಬಾಲಕಿಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಾಲಕಿ ನೀಡಿದ ಹೇಳಿಕೆಯಂತೆ, ಕಡಬ ನಿವಾಸಿಯಾದ ಧನುಷ್ (18) ಎಂಬಾತ ತನ್ನನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ.

kadaba times
kadaba times

ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪ್ರಕರಣಕ್ಕೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 64(2)(m) ಹಾಗೂ ಮಕ್ಕಳನ್ನು ಲೈಂಗಿಕ ಅಪರಾಧಗಳಿಂದ ರಕ್ಷಿಸುವ ಕಾಯ್ದೆ (POCSO Act)ಯ ಕಲಂ 5(l) ಮತ್ತು 6 ಅನ್ನು ಹೆಚ್ಚುವರಿಯಾಗಿ ಸೇರಿಸಲಾಗಿದೆ.

ಆರೋಪಿತ ಧನುಷ್‌ನನ್ನು ಜುಲೈ 22ರಂದು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Related Articles

Latest Articles