ಪಿಜಕಳದ ಸರ್ಕಾರಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ,ಶಾಲಾ ಕೈತೋಟ ಉದ್ಘಾಟನೆ

kadaba times

ಕಡಬ ತಾಲೂಕಿನ ಪಿಜಕಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಹಾಗೂ ಕಡಬ ಸಮುದಾಯ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಶಾಲಾ ಕೈತೋಟ ಉದ್ಘಾಟನೆ ನಡೆಯಿತು. ಈ ವೇಳೆ ಮಾತನಾಡಿದ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಕೃಷಿ ಸಂಸ್ಕೃತಿಯ ಬಗ್ಗೆಯೂ ಒಲವು ಮೂಡಿಸುವ ಕೆಲಸವಾಗಬೇಕು ಎಂದು ಅಭಿಪ್ರಾಯಪಟ್ಟರು.

kadaba times
uniq

ಕಡಬ:  ಕಡಬ ತಾಲೂಕಿನ ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ನೇತೃತ್ವದಲ್ಲಿ, ಕಡಬ ಸಮುದಾಯ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ  ಆರೋಗ್ಯ ತಪಾಸಣಾ ಶಿಬಿರ ಹಾಗೂ ಪ್ರತಿಷ್ಠಾನದ ಆರ್ಥಿಕ ನೆರವಿನಿಂದ ಬೇಲಿ ನಿರ್ಮಿಸಲಾದ ಶಾಲೆಯ ಕೈತೋಟವನ್ನು ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ  ಉದ್ಘಾಟಿಸಿ  ಮಕ್ಕಳಿಗೆ ತರಕಾರಿ ಬೀಜಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು  “ಪ್ರಸ್ತುತ ಗ್ರಾಮೀಣ ಪ್ರದೇಶದ ಮಕ್ಕಳೂ ಸಹ ಕೃಷಿಯ ಬಗ್ಗೆ ಆಸಕ್ತಿ ವಹಿಸದಿರುವುದು ತೀವ್ರ ವಿಷಾದದ ಸಂಗತಿಯಾಗಿದೆ. ಶಾಲಾ ಶಿಕ್ಷಣದ ಜೊತೆ ಜೊತೆಗೇ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಹಾಗೂ ಆಸಕ್ತಿ ಮೂಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಿದೆ” ಎಂದು  ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾಭಿವೃದ್ಧಿ ಸಮಿತಿಯ (SDMC) ಅಧ್ಯಕ್ಷ ಅಶ್ರಫ್‌ ಎ. ಅವರು, “ಗ್ರಾಮೀಣ ಭಾಗದ ಸರಕಾರಿ ಕನ್ನಡ ಮಾಧ್ಯಮ ಶಾಲೆಗಳು ಉಳಿದು ಬೆಳೆಯಬೇಕಾದರೆ ಸ್ಥಳೀಯ ಸಮುದಾಯ ಹಾಗೂ ಸಂಸ್ಥೆಗಳ ಸಹಕಾರ ಅತ್ಯಗತ್ಯವೆಂದರು .

kadaba times
kadaba times
Bellippadi Rajendra Rai inaugurating school kitchen garden and distribution of vegetable seeds at Pijakala Government Primary School Kadaba
ಪಿಜಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೈತೋಟವನ್ನು ಉದ್ಘಾಟಿಸಿ ಮಕ್ಕಳಿಗೆ ತರಕಾರಿ ಬೀಜ ವಿತರಿಸಿದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಹಾಗೂ ಗಣ್ಯರು.

ಕಾರ್ಯಕ್ರಮದಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜ್ಯೋತಿರಾಜ್‌ ಮುಖ್ಯಅತಿಥಿಯಾಗಿ ಭಾಗವಹಿಸಿ ಶುಭಹಾರೈಸಿದರು.  ಜೇಸಿಐ ಕಡಬ ಕದಂಬ ಚಾರಿಟೇಬಲ್‌ ಟ್ರಸ್ಟ್‌ನ ಅಧ್ಯಕ್ಷ ನಾಗರಾಜ್‌ ಎನ್‌.ಕೆ., ಕಡಬ ಪಟ್ಟಣ ಪಂಚಾಯತ್‌ ಸದಸ್ಯ ದಯಾನಂದ ಗೌಡ ಪಿಜಕಳ, ಮುಖ್ಯಶಿಕ್ಷಕ ವೆಂಕಟ್ರಮಣ ಕೆ., ಪಿಜಕಳ ಕುಮಾರಧಾರ ಯುವಕ ಮಂಡಲದ ಅಧ್ಯಕ್ಷ ಹರೀಶ್‌ ಕಂಗುಳೆ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಮೋಹಿನಿ, ಶಿಕ್ಷಕ ಅಜಿತ್‌ಕುಮಾರ್‌ ಆಳ್ವ ಹಾಗೂ ಶಿಕ್ಷಕಿ ಕವಿತಾ ಉಪಸ್ಥಿತರಿದ್ದರು.

ಸಮುದಾಯ ಆರೋಗ್ಯ ಅಧಿಕಾರಿಗಳಾದ ಪೂರ್ಣಿಮಾ (ರೆಂಜಿಲಾಡಿ) ಹಾಗೂ ಸೋನಿಯಾ (ಕೋಡಿಂಬಾಳ) ಅವರು ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಗೌರವ ಶಿಕ್ಷಕಿ ಕೃಷ್ಣಜ್ಯೋತಿ ಸ್ವಾಗತಿಸಿ, ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಹೇಮಲತಾ ವಂದನಾರ್ಪಣೆ ನೆರವೇರಿಸಿದರು.

Related Articles

Latest Articles